ರೋಗ ಪೀಡಿತ ಕೈದಿ ಮೃತ್ಯು
Update: 2017-05-26 22:57 IST
ಮಂಗಳೂರು, ಮೇ 26: ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೈದಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಮಂಜುನಾಥ್ ಮೃತ ಕೈದಿ ಎಂದು ಗುರುತಿಸಲಾಗಿದೆ.
ಉರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣದಲ್ಲಿ ಆರೋಪಿ ಜೈಲು ಸೇರಿದ್ದ. ಮಾರಕ ಕಾಯಿಲೆಗೆ ತುತ್ತಾದ ಈತನನ್ನು ಚಿಕಿತ್ಸೆಗಾಗಿ ಮೇ 15ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.