7 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರಗೈದು ಹೊಲದಲ್ಲಿ ಎಸೆದುಹೋದ ದುಷ್ಕರ್ಮಿಗಳು

Update: 2017-05-27 13:05 GMT

ಅಲಹಾಬಾದ್, ಮೇ 27: ಏಳು ವರ್ಷದ ಬಾಲಕಿಯೋರ್ವಳನ್ನು ಸಾಮೂಹಿಕ ಅತ್ಯಾಚಾರಗೈದ ಘಟನೆ ಅಲಹಾಬಾದ್ ನ ಗ್ರಾಮವೊಂದರಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ.

ಜಿಲ್ಲೆಯ ಮುಖ್ಯಪಟ್ಟಣದಿಂದ 40 ಕಿ.ಮೀ. ದೂರದಲ್ಲಿರುವ ಗುರ್ ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.

“ತಾಯಿಯ ಜೊತೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದ ಬಾಲಕಿಯನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದರು. ಮನೆಯ ಸಮೀಪದ ಹೊಲವೊಂದರಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕಿಯನ್ನು ಗ್ರಾಮಸ್ಥರು ಮನೆಗೆ ತಂದು ಬಿಟ್ಟಿದ್ದಾರೆ. ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಬಾಲಕಿಯನ್ನು ಹೊಲದಲ್ಲಿ ಎಸೆದು ಹೋಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ,

ಘಟನೆಗೆ ಸಂಬಂಧಿಸಿ ನಾಲ್ವರು ಶಂಕಿತರನ್ನು ಬಂಧಿಸಲಾಗಿದೆ,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News