×
Ad

ಗೌರವಯುತ ಬದುಕಿಗೆ ಶಿಕ್ಷಣ, ಉದ್ಯೋಗ ಮುಖ್ಯ: ನ್ಯಾ.ಎಸ್.ಆರ್.ನಾಯಕ್

Update: 2017-05-27 21:10 IST

ಉಡುಪಿ, ಮೇ 27: ಶಿಕ್ಷಣ ಹಾಗೂ ಉದ್ಯೋಗ ಇಲ್ಲದೆ ಸಮಾಜದಲ್ಲಿ ಗೌರವಯುತ ಬದುಕು ನಡೆಸಲು ಸಾಧ್ಯವಿಲ್ಲ. ಸರಕಾರ ಪ್ರತಿಯೊಬ್ಬರಿಗೆ ಶಿಕ್ಷಣ, ತರಬೇತಿ ಹಾಗೂ ಉದ್ಯೋಗ ನೀಡುವ ಕೆಲಸವನ್ನು ಅಗತ್ಯವಾಗಿ ಮಾಡ ಬೇಕಾಗಿದೆ ಎಂದು ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಹೇಳಿದ್ದಾರೆ.

ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಜಿಲ್ಲಾ ಮೊಗವೀರ ಯುವ ಸಂಘಟನೆಯ ವತಿಯಿಂದ ಜಿಲ್ಲೆಯ ಎಲ್ಲ ಸಮಾಜದ 5100 ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟು ಪುಸ್ತಕ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಭಾರತದಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಮಕ್ಕಳು ಶಾಲೆಯಿಂದ ಹೊರಗೆ ಉಳಿ ದಿದ್ದಾರೆ. ಹೆಚ್ಚಿನ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಆದುದ ರಿಂದ ಸರಕಾರಗಳು ಆತ್ಮಸಾಕ್ಷಿಯಾಗಿ ನಡೆದುಕೊಂಡು ಹೆಣ್ಣು ಮಕ್ಕಳು ಶಿಕ್ಷಣ ದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದವರು ತಿಳಿಸಿದರು.

ಭಾರತದಲ್ಲಿ ಸೇವೆ ಮಾಡಲು ಸಂಪತ್ತು ಹಾಗೂ ಸೇವಾ ಮನೋಭಾವ ಅವಶ್ಯಕ. ಇದನ್ನು ಬಳಸಿಕೊಂಡು ಸಮಾಜದಲ್ಲಿರುವ ಬಡವರ ಸೇವೆಯನ್ನು ಮಾಡಬಹುದಾಗಿದೆ. ಭಾರತದಲ್ಲಿ ಬದುಕುವ ಹಕ್ಕಿನಿಂದ ವಂಚಿತರಾದವರು ಬಹಳಷ್ಟು ಸಂಖ್ಯೆಯಲ್ಲಿದ್ದಾರೆ. ಅಂತಹವರನ್ನು ಗುರುತಿಸಿ ತಮ್ಮ ಸಂಪಾದನೆಯ ಸ್ವಲ್ಪ ಪ್ರಮಾಣವನ್ನು ಅವರ ಕಲ್ಯಾಣಕ್ಕಾಗಿ ವಿನಿಯೋಗಿಸಬೇಕು ಎಂದರು.

ಟ್ರಸ್ಟ್‌ನ ಅಧ್ಯಕ್ಷ ಡಾ.ಜಿ.ಶಂಕರ್ ಮಾತನಾಡಿ, 13ನೆ ವರ್ಷದ ಈ ನೋಟು ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಉಡುಪಿಯಲ್ಲಿ 2230, ಕುಂದಾಪುರದಲ್ಲಿ 1500 ಬಡ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿದೆ. ಅದೇ ರೀತಿ ಶಿವಮೊಗ್ಗ, ಶೃಂಗೇರಿ, ಚಿಕ್ಕಮಗಳೂರು, ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲಿ 1370, ವಿಜಯಪುರದಲ್ಲಿ 3500 ಮಕ್ಕಳಿಗೆ ನೋಟು ಪುಸ್ತಕಗಳನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಗಣೇಶ್ ಕಾಂಚನ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಾಜಿ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಉಪಸ್ಥಿತರಿದ್ದರು. ಆನಂದ ಎಸ್.ಕೆ. ಸ್ವಾಗತಿಸಿದರು. ರಾಘವೇಂದ್ರ ಸುವರ್ಣ ಬೈಕಾಡಿ ವಂದಿಸಿದರು. ಶಿವರಾಂ ಕೆ.ಎಂ. ಕಾರ್ಯಕ್ರಮ ನಿರೂಪಿಸಿ ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News