ಪ್ರತ್ಯೇಕ ಅಕ್ರಮ ಮದ್ಯ ಮಾರಾಟ: ಇಬ್ಬರ ಬಂಧನ

Update: 2017-05-27 17:18 GMT

ಚಿಕ್ಕಮಗಳೂರು, ಮೇ 27: ಮೂಡಿಗೆರೆ ತಾಲೂಕಿನ ಗೋಣಿಬೀಡು ಮತ್ತು ಚಿಕ್ಕಮಗಳೂರು ಡಿಸಿಐಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಡೆ ಅಕ್ರಮ ಮದ್ಯ ಮಾರಾಟ ಸಂಬಂಧ ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.


ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಮಣ್ಣೀಕೆರೆ ಎಂಬಲ್ಲಿ ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ನವೀನ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 2,100 ರೂ. ವೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಇನ್ನೊಂದು ಪ್ರಕರಣದಲ್ಲಿ ಚಿಕ್ಕಮಗಳೂರು ಡಿಸಿಐಬಿ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿ ಬಸವನಹಳ್ಳಿ ನೃಪತುಂಗ ರಸ್ತೆಯ ಸ್ವಾಮಿ ವಿವೇಕಾನಂದ ಸ್ವಾಮಿ ಕಾಲೇಜಿನ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರುತ್ತಿದ್ದ ಆರೋಪದಡಿ ಬಸವನಹಳ್ಳಿಯ ಗಂಗಾಧರ್(45)ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 1,969 ರೂ. ವೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News