ಮನೆಗೆ ನುಗ್ಗಿ ಕಳವು

Update: 2017-05-28 12:28 GMT

 ಸಾಗರ, ಮೇ 28: ಮನೆಗೆ ನುಗ್ಗಿದ ಕಳ್ಳರು ಸುಮಾರು 2.50 ಲಕ್ಷ ರೂ. ಮೌಲ್ಯದ ನಗ-ನಗದು ಕಳವು ಮಾಡಿದ ಪ್ರಕರಣಕ್ಕೆ  ಸಂಬಂಧಪಟ್ಟಂತೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಗರದ ಕೆ.ಟಿ. ಬಡಾವಣೆಯ ಅಣಲೆಕೊಪ್ಪ ನಿವಾಸಿ ಅನಿಲ್ ಎಂಬುವವರು ಮೂರು ದಿನಗಳಿಂದ ಮನೆಯಲ್ಲಿ ಇಲ್ಲದೆ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಹಿಂಭಾಗದಿಂದ ಒಳಗೆ ಪ್ರವೇಶಿಸಿ, ಬೆಡ್‌ರೂಮಿನಲ್ಲಿದ್ದ 30ಸಾವಿರ ರೂ. ನಗದು, 127 ಗ್ರಾಂ ಚಿನ್ನಾಭರಣ ಹಾಗೂ 3 ಬ್ರಾಂಡೆಡ್ ವಾಚ್ ಸೇರಿದಂತೆ ಸುಮಾರು 2.55 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಇಲ್ಲಿನ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News