×
Ad

​ಸಾರ್ವಜನಿಕ ಸ್ಥಳದಲ್ಲಿ ಜಾನುವಾರು ಹತ್ಯೆ ; ಕೇರಳದ ಮೂವರು ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಅಮಾನತು

Update: 2017-05-29 12:42 IST

ಕಣ್ಣೂರು, ಮೇ 29:  ಹತ್ಯೆಗಾಗಿ ಜಾನುವಾರು ಮಾರಾಟ ಮತ್ತು ಸಾಗಾಟ ನಿಷೇಧಿಸಿ  ಕೇಂದ್ರ ಸರಕಾರ ಹೊರಡಿಸಿರುವ ಆದೇಶದ ವಿರುದ್ಧ ಕೇರಳದ ಕಣ್ಣೂರಿನಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಡೆಸಿರುವ ಪ್ರತಿಭಟನೆ ವೇಳೆ ಸಾರ್ವಜನಿಕವಾಗಿ ಜಾನುವಾರೊಂದರ   ಶಿರಚ್ಛೇಧ  ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.
ಪ್ರತಿಭಟನಾಕಾರರು ಜಾನುವಾರೊಂದನ್ನು ಸಾರ್ವಜನಿಕವಾಗಿ  ಹತ್ಯೆ ಮಾಡಿರುವ ಪ್ರಕರಣಕ್ಕೆ ಪೊಲೀಸರು ಕೆಲವು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಸಂಬಂಧ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಸಿ. ರಾಥೇಶ್‌  ಅವರು ನೀಡಿರುವ ದೂರಿನಂತೆ ಯುವ ಕಾಂಗ್ರೆಸ್‌ ಕಾರ್ಯಕರ್ತ ರಿಜಿಲ್ ಮಾಕುಲ್ತಿ ಸೇರಿದಂತೆ 16 ಮಂದಿ ವಿರುದ್ದ ಕೇರಳ ಪೊಲೀಸ್‌ ಕಾಯ್ದೆ( 120 ಎ) ಯಂತೆ ಪ್ರಕರಣ ದಾಖಲಿಸಿದ್ದರು.
ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಈ ಪ್ರಕರಣವನ್ನು  ಖಂಡಿಸಿ, ಇದನ್ನು ಗಂಭೀರವಾಗಿ ಪರಿಗಣಿಸಿದ್ದರು ಎಂದು ತಿಳಿದು ಬಂದಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News