×
Ad

ಇಂದು ಸಂಜೆಯೊಳಗೆ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ

Update: 2017-05-29 13:19 IST

ಹೊಸದಿಲ್ಲಿ, ಮೇ 29: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಸೋಮವಾರ ಸಂಜೆಯೊಳಗೆ ನೂತನ ಅಧ್ಯಕ್ಷರು ನೇಮಕಗೊಳ್ಳಲಿದ್ದಾರೆ.
ಹೊಸದಿಲ್ಲಿಯಲ್ಲಿ ಇಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರ ನಿವಾಸದಲ್ಲಿ ಕಾಂಗ್ರೆಸ್ ನ ಸಮನ್ವಯ ಸಮಿತಿ ಸಭೆ ನಡೆದಿದ್ದು,  ಸಭೆಯಲ್ಲಿ ಕೆಪಿಸಿಸಿಗೆ ನೂತನ ಅಧ್ಯಕ್ಷರ ಆಯ್ಕೆ, ಪಕ್ಷದ ಸಂಘಟನೆಯ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ರಾಹುಲ್‌ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಹಾಲಿ ಅಧ್ಯಕ್ಷ ಡಾ.ಜಿ.ಪರಮೇಶ್ವರ,ರಾಜ್ಯದ ಸಂಸದರು , ಸಚಿವರುಗಳೊಂದಿಗೆ ಮಾತುಕತೆ ನಡೆಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News