×
Ad

ಕೊರಗ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Update: 2017-05-29 20:26 IST

ಉಡುಪಿ, ಮೇ 29: 2016-17ನೇ ಸಾಲಿನಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚೆಗೆ ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಪಂ ಉಪ್ಯಾಕ್ಷೆ ಶೀಲಾಕೆ.ಶೆಟ್ಟಿ, ಸಮುದಾಯದ ವಿದ್ಯಾರ್ಥಿಗಳೆಲ್ಲರೂ ಉನ್ನತ ಶಿಕ್ಷಣವನ್ನು ಪಡೆಯಬೇಕು ಹಾಗೂ ಸಮಾಜದ ಮುಖ್ಯವಾಹಿನಿಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಪಡೆದು ತಮ್ಮ ಸಮುದಾಯದ ಏಳಿಗೆಗಾಗಿ ಪ್ರಯತ್ನಿಸಬೇಕು ಎಂದುಶು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ ಸಮುದಾಯದ ಅಭಿವೃದ್ಧಿಗಾಗಿ ಸರಕಾರದ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
  ಸಂಪನ್ಮೂಲ ವ್ಯಕ್ತಿಗಳಾದ ಬಸ್ರೂರು ಶಾರದಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರೊಪೆಸರ್ ಪ್ರತಾಪಚಂದ್ರ ಶೆಟ್ಟಿ ವೃತ್ತಿ ಮಾರ್ಗದರ್ಶನದ ಬಗ್ಗೆ ಮಾಹಿತಿ ನೀಡಿದರು. ಬಾಳಿಗಾ ಆಸ್ಪತ್ರೆಯ ಡಾ. ವಿರೂಪಾಕ್ಷ ದೇವರಮನಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅಗತ್ಯ ಮಾಹಿತಿಯನ್ನು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ನೀಡಿದರು.

ಕಾರ್ಯಕ್ರಮದಲ್ಲಿ ಕೊರಗ ಸಮುದಾಯದ ಮುಖಂಡರಾದ ಗಣೇಶ್ ಕೆದೂರು ಹಾಗೂ ಗಣೇಶ ಬಾರ್ಕೂರು, ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಸುಬ್ರಮಣ್ಯ, ಮಧುಕರ್, ನಾಗರಾಜ್, ಐಟಿಡಿಪಿ ಅಧಿಕಾರಿಗಳಾದ ವಿಶ್ವನಾಥ್ ವುತ್ತು ಉಮಾಕಾಂತಿ ಉಪಸ್ಥಿತರಿದ್ದರು.
 

ವಿದ್ಯಾರ್ಥಿಗಳಿಗೆ ಅಗತ್ಯ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಅಭಿಪ್ರಾಯ ಗಳನ್ನು ವ್ಯಕ್ತಪಡಿಸಿದರು. ಪೋಷಕರು ಹಾಗೂ ವಿದ್ಯಾರ್ಥಿಗಳು ಸೇರಿ ಒಟ್ಟು 80 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News