ಪಾಕಿಸ್ತಾನಿ ಪ್ರಜೆಗಳ ಬಂಧನ ಪ್ರಕರಣ: ಆರೋಪಿಗಳಿಗೆ ಆಧಾರ್ ಕಾರ್ಡ್ ಮಾಡಿಕೊಟ್ಟ ವೈದ್ಯ ಪತ್ತೆ

Update: 2017-05-29 16:27 GMT

ಬೆಂಗಳೂರು, ಮೇ 29: ಅಕ್ರಮವಾಗಿ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿದ್ದ ಆರೋಪದ ಮೇಲೆ ಬಂಧನವಾಗಿರುವ ಮೂವರು ಪಾಕಿಸ್ತಾನಿ ಪ್ರಜೆಗಳ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು, ಆರೋಪಿಗಳಿಗೆ ಆಧಾರ್ ಕಾರ್ಡ್ ಮಾಡಿಕೊಟ್ಟ ವ್ಯಕ್ತಿಯನ್ನು ಪತ್ತೆ ಮಾಡಿದ್ದಾರೆ ಎನ್ನಲಾಗಿದೆ.

ನಗರದ ವೈದ್ಯರೊಬ್ಬರು ಹಣಕ್ಕಾಗಿ ತಮ್ಮ ಪರಿಚಯದವರ ಬಳಿ ಹೇಳಿ ಪಾಕಿಸ್ತಾನಿ ಪ್ರಜೆಗೆಳಿಗೆ ಆಧಾರ್ ಕಾರ್ಡ್ ಮಾಡಿಕೊಟ್ಟಿದಲ್ಲದೆ, ಆಧಾರವಾಗಿದ್ದರು ಎನ್ನಲಾಗಿದ್ದು, ಆ ವೈದ್ಯರ ಮೇಲೆ ಇಲ್ಲಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅಧಿಕಾರಿ ಹೆಸರು: ಗೆಜೆಟೆಡ್ ಅಧಿಕಾರಿಯೊಬ್ಬರು ಸಹ ಆಧಾರ್‌ ಕಾರ್ಡ್ ಮಾಡಿಸಿಕೊಟ್ಟಿದ್ದರು ಎಂದು ಪಾಕ್ ಪ್ರಜೆಗಳು ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದ್ದು, ನಗರದ ಕದಿರೇನಹಳ್ಳಿಯ ಆಧಾರ್ ಕೇಂದ್ರದಲ್ಲಿ ಬಾಡಿಗೆ ಒಪ್ಪಂದ ಕರಾರು ಪತ್ರ ಮತ್ತು ಗೆಜೆಟೆಡ್ ಅಧಿಕಾರಿಯ ಸಹಿಯ ಆಧಾರದ ಮೇಲೆ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದರು ಎನ್ನುವ ಮಾಹಿತಿ ಇದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News