×
Ad

ಮುಹಮ್ಮದ್ ಅತೀಖ್ ಅಹ್ಮದ್

Update: 2017-05-29 22:32 IST

 ನಿಧನಬೆಂಗಳೂರು, ಮೇ 29: ಸಾಲಾರ್ ಪಬ್ಲಿಕೇಷನ್ ಟ್ರಸ್ಟ್ ಅಧ್ಯಕ್ಷ ಹಾಗೂ ಸಿಟಿ ಮಾರುಕಟ್ಟೆಯ ಜಾಮಿಯಾ ಮಸ್ಜಿದ್‌ನ ಕಾರ್ಯದರ್ಶಿ ಮುಹಮ್ಮದ್ ಅತೀಖ್ ಅಹ್ಮದ್ (73) ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಗರದ ಫ್ರೇಜರ್‌ ಟೌನ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅತೀಖ್ ಅಹ್ಮದ್, ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಹಿಂದಿರುಗಿದ್ದರು. ಸಿಟಿ ಮಾರುಕಟ್ಟೆಯ ಜಾಮಿಯಾ ಮಸ್ಜಿದ್‌ನ ಮುಸ್ಲಿಂ ಚಾರಿಟೇಬಲ್ ಫಂಡ್ ಟ್ರಸ್ಟ್‌ನ ಕಾರ್ಯದರ್ಶಿಯಾಗಿ ಸುದೀರ್ಘ 32 ವರ್ಷಗಳಿಂದ ಸೇವೆ ಸಲ್ಲಿಸಿದ ಅವರು, ಮುಸ್ಲಿಮ್ ಸಮುದಾಯದಲ್ಲಿ ಪ್ರಖ್ಯಾತಿಯನ್ನು ಹೊಂದಿದ್ದರು.

ಸಾಲಾರ್ ಪಬ್ಲಿಕೇಷನ್ ಟ್ರಸ್ಟ್‌ನ ಅಧ್ಯಕ್ಷರಾಗಿ 17 ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದರು. ಇದಲ್ಲದೆ, ಸೆಂಟ್ರಲ್ ಮುಸ್ಲಿಮ್ ಅಸೋಸಿಯೇಷನ್, ಅಲ್ ಅಮೀನ್, ಮಜ್ಲಿಸೆ ಮಿಲ್ಲಿಯಾ ಇಸ್ಲಾಮಿಯಾ, ಜಾಮಿಯುಲ್ ಉಲೂಮ್ ಬನ್ನಿಕುಪ್ಪೆ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ಅತೀಖ್ ಅಹ್ಮದ್ ಸೇವೆಯನ್ನು ಸಲ್ಲಿಸಿದ್ದರು.

ಮೃತರು ಪತ್ನಿ, ಐವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News