ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ: ನಿಯಂತ್ರಣಕ್ಕೆ ವಿಶೇಷ ತಂಡ

Update: 2017-05-30 18:24 GMT

ಮಂಗಳೂರು, ಮೇ 30: ವಿಶ್ವ ತಂಬಾಕು ರಹಿತ ದಿನ ಮೇ 31ರಂದು ವಿಶ್ವಾದ್ಯಂತ ಆಚರಿಸಲಾಗುತ್ತಿದ್ದು, ಈ ಸಂದರ್ಭ ತಂಬಾಕು ನಿಯಂತ್ರಣ ಕಾಯ್ದೆ (ಕೋಟ್ಪಾ) 2003ರ ಅಡಿ ಮಂಗಳೂರು ನಗರದ ಸಾರ್ವಜನಿಕರು ಅಥವಾ ವ್ಯಾಪಾರಿಗಳು ಕಾಯ್ದೆ ಉಲ್ಲಂಘಿಸಿದ್ದಲ್ಲಿ ಈಗಾಗಲೇ ರಚಿಸಲಾಗಿರುವ ವಿಶೇಷ ತಂಡದ ಮೂಲಕ ಅಂತಹವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಮತ್ತು ತಂಬಾಕು ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ.ರಾಜೇಶ್ ಬಿ.ವಿ. ತಿಳಿಸಿದ್ದಾರೆ. ಸಾರ್ವಜನಿಕರು ಮತ್ತು ಅಂಗಡಿ ಮಾಲೀಕರು ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕಾನೂನು ಪಾಲನೆ ಮಾಡುವ ಮೂಲಕ ವ್ಯವಸ್ಥೆಯೊಂದಿಗೆ ಸಹಕರಿಸಬೇಕೆಂದು ಅವರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News