ಬಿಎಸ್‌ವೈ ಎರಡು ನಾಲಿಗೆ ಮನುಷ್ಯ: ಸಿದ್ದರಾಮಯ್ಯ
Update: 2017-05-31 12:38 IST
ಹೊಸದಿಲ್ಲಿ, ಮೇ 31: ಮಾಜಿ ಮುಖ್ಯ ಮಂತ್ರಿ ಹಾಗೂ ರಾಜ್ಯಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಎರಡು ನಾಲಿಗೆಯ ಮನುಷ್ಯ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ಬೈಲುಕುಪ್ಪೆಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಅವರು ಮುಖ್ಯ ಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಈಗ ನಮಗೆ ಸಾಲ ಮನ್ನಾ ಮಾಡಿ ಎಂದು ಹೇಳುತ್ತಿದ್ದಾರೆ. ಅವರಿಗೆ ಸಾಲ ಮನ್ನಾ ಮಾಡಿ ಎಂದು ಹೇಳುವ ನೈತಿಕತೆ ಇಲ್ಲ ಎಂದು ಅಭಿಪ್ರಾಯಪಟ್ಟರು.