ಕೈಮಗ್ಗ, ಜವಳಿ ಡಿಪ್ಲೊಮಾ ಕೋರ್ಸಿಗೆ ಅರ್ಜಿ ಆಹ್ವಾನ
ಮಂಗಳೂರು, ಮೇ 31: 2017-18 ನೆ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ 42 ಪುರುಷ/ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತೀ ವಿದ್ಯಾರ್ಥಿಗೆ ಪ್ರತೀ ತಿಂಗಳು ರೂ. 1,200/- ರವರೆಗೆ ಶಿಷ್ಯವೇತನ ನೀಡಲಾಗುವುದು.
ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತೀರ್ಣರಾಗಿರುವ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.
ಜುಲೈ 1 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ), ಎಸ್.ಪಿ.ಕೆ.ಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ), ಭಾರತೀಯ ಕೈಮಗ್ಗ ತಂತಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) ಹಾಗೂ ಕಣ್ಣೂರು (ಕೇರಳ) ಸಂಸ್ಥೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.
ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಯೆಯ್ಯಿಡಿ, ಮಂಗಳೂರು ಈ ಕಚೇರಿ ದೂರವಾಣಿ ಸಂಖ್ಯೆ:0824-2225056 ಇಲ್ಲಿ ಸಂಪರ್ಕಿಸಿ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ ಸಂಸ್ಥೆಗೆ ಜೂನ್ 12 ರೊಳಗೆ ಸಲ್ಲಿಸಬೇಕು ಎಂದು ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ದ.ಕ. ಜಿ.ಪಂ. ಮಂಗಳೂರು ಇವರ ಪ್ರಕಟನೆ ತಿಳಿಸಿದೆ.