×
Ad

ಯುಪಿಎಸ್ಸಿ: ಬಂಟ್ವಾಳದ ನವೀನ್ ಭಟ್ ಗೆ 37ನೆ ರ‍್ಯಾಂಕ್

Update: 2017-06-01 00:29 IST

ಹೊಸದಿಲ್ಲಿ, ಮೇ 31: 2016ನೆ ಸಾಲಿನ ಕೇಂದ್ರ ಲೋಕಸೇವಾ ಆಯೋಗ (​ಯುಪಿಎಸ್‌ಸಿ) ಪರೀಕ್ಷೆಯಲ್ಲಿ ಬಂಟ್ವಾಳದ ನವೀನ್ ಭಟ್ 37ನೆ ರ್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ.

ಮೂಡುಬಿದಿರೆ ರೋಟರಿ ಆಂಗ್ಲಮಾಧ್ಯಮ ಶಾಲೆ ಹಾಗೂ ಮೊಡಂಕಾಪು ಇನ್ಫಾಂಟ್ ಜೀಸಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸವನ್ನು ನಡೆಸಿದ್ದ ನವೀನ್ ಭಟ್, ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದರು. ಬೆಂಗಳೂರಿನ ಮೆಡಿಕಲ್ ಕಾಲೇಜೊಂದರಲ್ಲಿ ಎಂಬಿಬಿಎಸ್ ನಡೆಸಿರುವ ಇವರು, 2009ನೆ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲಿಗರಾಗಿ ಹೊರಹೊಮ್ಮಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News