×
Ad

ಕಾರು ಢಿಕ್ಕಿ: ಬೈಕ್ ಸವಾರನಿಗೆ ಗಾಯ

Update: 2017-06-01 21:24 IST

ಪುತ್ತೂರು, ಜೂ.1: ಬೈಕ್ ಮತ್ತು ಕಾರು ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಎಂಬಲ್ಲಿ ನಡೆದಿದೆ.

ಬೈಕ್ ಸವಾರ ಪುತ್ತೂರು ತಾಲೂಕಿನ ಕಬಕ ಗ್ರಾಮದ ನೆಹರೂನಗರ ನಿವಾಸಿ ನಾಗೇಶ್ ಕುಮಾರ್ ಗಾಯಗೊಂಡವರು ಎಂದು ಗುರುತಿಸಲಾಗಿದೆ.

ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪುತ್ತೂರು ಕಡೆಯಿಂದ ಹೋಗುತ್ತಿದ್ದ ಕಾರು ಮತ್ತು ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿತ್ತು. ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News