×
Ad

ಯುವಕ ಆತ್ಮಹತ್ಯೆ

Update: 2017-06-01 22:02 IST

ಬಂಟ್ವಾಳ, ಜೂ.1: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನರಿಕೊಂಬು ಗ್ರಾಮದಲ್ಲಿ ಗುರುವಾರ ನಡೆದಿದೆ.

ಇಲ್ಲಿನ ನಿವಾಸಿ ಮೋಹನ್ (20) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಬುಧವಾರ ಬೆಳಗ್ಗೆ ಮೊಗರ್ನಾಡಿಗೆ ಕೆಲಸಕ್ಕೆಂದು ತೆರಳಿದ್ದು ಮಧ್ಯಾಹ್ನ ಮನೆಗೆ ಬಂದು ತಾಯಿ ಬಳಿ ಹೊಟ್ಟೆ ನೋವು ಎಂದು ಹೇಳಿದ್ದು, ಬಳಿಕ ಕೆಲಸಕ್ಕೆ ತೆರಳಿದ್ದ ಈತ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಗುರುವಾರ ಬೆಳಗ್ಗೆ ಈತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಸಮೀಪದ ಗುಡ್ಡೆಯಲ್ಲಿ ಕಂಡುಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News