×
Ad

ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರ ಧರಣಿ

Update: 2017-06-01 22:35 IST

ಶಿವಮೊಗ್ಗ, ಜೂ.1: ಮರಳು ಗಣಿಗಾರಿಕೆಯಿಂದ ಗ್ರಾಮದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮ ಕುರಿತು ಸ್ಥಳ ಪರಿಶೀಲನೆ ನಡೆಸಿ, ಪರಿಸರಕ್ಕೆ ಹಾನಿಯಾಗದಂತೆ ಕಾನೂನಿನ ಅಡಿಯಲ್ಲಿ ಗಣಿಗಾರಿಕೆ ನಡೆಸಲು ನಿದರ್ಶನ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ತಾಲೂಕಿನ ಹಾಡೋನಹಳ್ಳಿ ಗ್ರಾಮಸ್ಥರು ಗುರುವಾರ ನಗರದ ಡಿಸಿ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸಿದರು.

ಹೊಳಲೂರು ಹೋಬಳಿ, ಹಾಡೋನಹಳ್ಳಿ ಗ್ರಾಮದ ಹತ್ತಿರ ಮರಳು ಗಣಿಗಾರಿಕೆಗೆ ಭೂ ಮತ್ತು ವಿಜ್ಞಾನ ಇಲಾಖೆಯಿಂದ ಅನುಮತಿ ನೀಡಲಾಗಿದ್ದು, ಈ ರೀತಿ ಅನುಮತಿ ನೀಡಿದ ವ್ಯಕ್ತಿಗಳು ಕಾನೂನುಬಾಹಿರವಾಗಿ ಗಣಿಗಾರಿಕೆ ಮಾಡುತ್ತಿದ್ದಾರೆ. ರಾತ್ರಿ ವೇಳೆ ಹಿಟಾಚಿ ಯಂತ್ರ ಬಳಸಿ ಮರಳನ್ನು ತೆಗೆಯುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.


ಮರಳು ಸಾಗಣೆ ಮಾಡುವ ವಾಹನಗಳಿಗೆ 10 ಟನ್ ಕಾನೂನು ಮಿತಿ ಇದೆ. ಆದರೆ ಇವರು 15 ಟನ್ ಮರಳು ಸಾಗಣೆ ಮಾಡುತ್ತಿದ್ದಾರೆ. ನಿಯಮ ಪಾಲನೆ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಮರಳು ಸಾಗಣೆಯಲ್ಲಿ ಕಾನೂನು ಪರಿಪಾಲನೆಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News