×
Ad

​ಪ್ರತಿಷ್ಠಿತ ಶಾಲೆ ಸೇರ್ಪಡೆಗೆ ಅರ್ಜಿ ಆಹ್ವಾನ

Update: 2017-06-01 23:18 IST

ಉಡುಪಿ, ಜೂ.1: ಉಡುಪಿ ಸಮಾಜ ಕಲ್ಯಾಣ ಇಲಾಖಾ ವತಿಯಿಂದ, 2017-18ನೇ ಸಾಲಿಗೆ ಆರ್ಥಿಕವಾಗಿ ಹಿಂದುಳಿದಿರುವ, ವಾರ್ಷಿಕ ವರಮಾನ 2 ಲಕ್ಷ ರೂ.ಗಳ ಮಿತಿಗೆ ಒಳಪಟ್ಟ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ವಸತಿ ಸೌಲಭ್ಯ ಹೊಂದಿರುವ ಪ್ರತಿಷ್ಠಿತ ಶಾಲೆಯಲ್ಲಿ 6ನೇ ತರಗತಿಗೆ ಹೊಸದಾಗಿ ಸೇರ್ಪಡೆಗೊಳಿಸಲು ಸರಕಾರ ಅವಕಾಶ ಕಲ್ಪಿಸಿದೆ.
 

ಇದಕ್ಕಾಗಿ 5ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ಆಸಕ್ತ ಪರಿಶಿಷ್ಟ ಜಾತಿಯ ಒಟ್ಟು ಐವರು ವಿದ್ಯಾರ್ಥಿಗಳನ್ನು, 6ನೇ ತರಗತಿಗೆ ಸೇರಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ‘ಬಿ’ ಬ್ಲಾಕ್, 2ನೇ ಮಹಡಿ ರಜತಾದ್ರಿ ಮಣಿಪಾಲ ಇಲ್ಲಿಂದ ಪಡೆದು ಜೂ. 20ರೊಳಗೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2574892ನ್ನು ಸಂಪರ್ಕಿಸುವಂತೆ ಸವಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News