ಉಡುಪಿ: ಉಚಿತ ಯೋಗ ತರಬೇತಿ
ಉಡುಪಿ, ಜೂ. 2: ಜೂ.21ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆಗೆ ಪೂರ್ವಭಾವಿಯಾಗಿ ಜೂ. 20ರವರೆಗೆ ಜಿಲ್ಲೆಯ 12 ಕೇಂದ್ರ ಗಳಲ್ಲಿ ಉಚಿತ ಯೋಗ ತರಬೇತಿಯನ್ನು ಪ್ರಾರಂಭಿಸಲಾಗಿದೆ.
ಕಾರ್ಕಳ ತಾಲೂಕಿನಲ್ಲಿ ಭುವನೇಂದ್ರ ಪ್ರೌಢಶಾಲೆ ಕಾರ್ಕಳ, ಕಾರ್ಕಳ ಪೆರ್ವಾಜೆ ಸುಂದರ ಪುರಾಣಿಕ್ ಸರಕಾರಿ ಪ್ರೌಢಶಾಲೆ ಹಾಗೂ ಸಮಾಜ ಮಂದಿರ ಹೆಬ್ರಿಯಲ್ಲಿ, ಕುಂದಾಪುರ ತಾಲೂಕಿನ ಭಂಡಾರ್‌ಕಾರ್ಸ್ ಕಾಲೇಜು, ಉಡುಪಿಯ ಎಸ್‌ಡಿಎಂ ಆಯುರ್ವೇದ ಕಾಲೇಜು ಉದ್ಯಾವರ, ತ್ರಿಶಾ ಕಾಲೇಜು ಕಲ್ಯಾಣಪುರ, ದುರ್ಗಾಪರಮೇಶ್ವರಿ ದೇವಸ್ಥಾನ ಸಭಾಂಗಣ ಮಂದಾರ್ತಿ, ಸ್ವಾಮಿ ವಿವೇಕಾನಂದ ಸ್ವಾಸ್ಥ ಕೇಂದ್ರದ ಸಹಯೋಗದೊಂದಿಗೆ ಪದ್ಮಾವತಿ ಕಲ್ಯಾಣ ಮಂಟಪ-ಮಾರುತಿ ಲೇನ್, ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದಲ್ಲಿ ರಾಜಾಂಗಣ ಉಡುಪಿ, ರೋಟರಿ ಕ್ಲಬ್ ಸಹಯೋಗದೊಂದಿಗೆ ಕೆರೆಬದಿ ನಾಗಸ್ಥಾನ ಪರ್ಕಳ, ಕಾರಂತ ಭವನ ಸಾಲಿಗ್ರಾಮ, ಕಾರಂತ ಥೀಮ್ ಪಾರ್ಕ್ ಕೋಟ ಇಲ್ಲಿ ಯೋಗ ಶಿಕ್ಷಕರಿಂದ ಒಂದು ತಿಂಗಳ ಕಾಲ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ.
ಇದರ ಜೊತೆಗೆ ವಿವಿಧ ಕೇಂದ್ರಗಳಲ್ಲಿ ಯೋಗ ಸ್ಪರ್ಧೆ ಹಾಗೂ ಉಚಿತ ಆರೋಗ್ಯ ತಪಾಸಣೆಯನ್ನು ಸಹ ನಡೆಸಲಾಗುತ್ತಿದೆ. ಜನ ಸಾಮಾನ್ಯರಲ್ಲಿ ಯೋಗದ ಬಗ್ಗೆ ಇನ್ನಷ್ಟು ಅರಿವು ಮೂಡಿಸಲು ಕೇಂದ್ರ ಸರಕಾರದ ಆಯುಷ್ ಮಂತ್ರಾಲಯ ಹಾಗೂ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಸಂಸ್ಥೆಯು ಬೃಹತ್ ಯೋಗ ದಿನಾಚರಣೆಯನ್ನು ಹಮ್ಮಿಕೊಂಡಿದೆ.
ಉಡುಪಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಉಚಿತ ಯೋಗ ತರಬೇತಿ ನೀಡುವ ಜವಾಬ್ದಾರಿಯನ್ನು ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ವುತ್ತು ಯೋಗ ಕಾಲೇಜಿಗೆ ನೀಡಲಾಗಿದೆ.
ಉಡುಪಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಉಚಿತ ಯೋಗ ತರಬೇತಿ ನೀಡುವ ಜವಾಬ್ದಾರಿಯನ್ನು ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜಿಗೆ ನೀಡಲಾಗಿದೆ.
ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಂತೆ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ಕಾಲೇಜಿನ ಪ್ರಾಚಾರ್ಯ ಡಾ.ಪ್ರಶಾಂತ್ ಶೆಟ್ಟಿ ಹಾಗೂ ಉಡುಪಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಅಲಕಾನಂದ ರಾವ್ ಇವರ ಜಂಟಿ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಈ ಉಚಿತ ಯೋಗ ತರಬೇತಿ ಶಿಬಿರದಲ್ಲಿ ಸಾರ್ವಜನಿಕರು ಭಾಗವಹಿಸಿ ಶಿಬಿರದ ಪೂರ್ಣ ಉಪಯೋಗವನ್ನು ಪಡೆದುಕೊಳ್ಳುವಂತೆ ಉಡುಪಿ ಜಿಲ್ಲಾ ಯೋಗ ದಿನಾಚರಣೆಯ ಉಸ್ತುವಾರಿಯನ್ನು ವಹಿಸಿಕೊಂಡಿರುವ ಪರೀಕ ಆಸ್ಪತ್ರೆಯ ಸಿಎಂಓ ಡಾ. ಶಿವರಾಜ್ ಪಾಟೀಲ್ ಹಾಗೂ ಡಾ. ರಫೀಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳದ ಡಾ.ಡಿ.ವೀರೇಂದ್ರಹೆಗ್ಗಡೆ ಮಾರ್ಗದರ್ಶನದಂತೆ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ಕಾಲೇಜಿನ ಪ್ರಾಚಾರ್ಯ ಡಾ.ಪ್ರಶಾಂತ್‌ಶೆಟ್ಟಿ ಹಾಗೂ ಉಡುಪಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಅಲಕಾನಂದ ರಾವ್ ಇವರ ಜಂಟಿ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಈ ಉಚಿತ ಯೋಗ ತರಬೇತಿ ಶಿಬಿರದಲ್ಲಿ ಸಾರ್ವಜನಿಕರು ಭಾಗವಹಿಸಿ ಶಿಬಿರದ ಪೂರ್ಣ ಉಪಯೋಗವನ್ನು ಪಡೆದುಕೊಳ್ಳುವಂತೆ ಉಡುಪಿ ಜಿಲ್ಲಾ ಯೋಗ ದಿನಾಚರಣೆಯ ಉಸ್ತುವಾರಿಯನ್ನು ವಹಿಸಿಕೊಂಡಿರುವ ಪರೀಕ ಆಸ್ಪತ್ರೆಯ ಸಿಎಂಒ ಡಾ. ಶಿವರಾಜ್ ಪಾಟೀಲ್ ಹಾಗೂ ಡಾ.ರಫೀಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.