ಉಡುಪಿ: ಕಾಂಗ್ರೆಸ್ ಪ್ರಚಾರ ಸಮಿತಿ; ಅಧ್ಯಕ್ಷರಾಗಿ ಅಮೃತ ಶೆಣೈ ನೇಮಕ
Update: 2017-06-02 20:19 IST
ಉಡುಪಿ, ಜೂ.2: ಮಂಗಳೂರು ವಿವಿ ಸೆನೆಟ್ ಸದಸ್ಯ ಹಾಗೂ ಉದ್ಯಮಿ ಅಮೃತ್ ಶೆಣೈ ಅವರನ್ನು ಕಾಂಗ್ರೆಸ್ ಪಕ್ಷದ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ.
ಅಮೃತ್ ಶೆಣೈ ಅವರು ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.