×
Ad

ಹೆಬ್ರಿಯಲ್ಲಿ ಕೇಂದ್ರ ಸಚಿವ ಅನಂತ ಕುಮಾರ್

Update: 2017-06-02 21:30 IST

ಹೆಬ್ರಿ, ಜೂ.2: ರಾಜ್ಯದಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ರಾಜ್ಯಾದ್ಯಂತ ಎಲ್ಲಾ ಹಂತದಲ್ಲೂ ಬಿಜೆಪಿಯ ಪರವಾಗಿ ಭಾರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಕುಟುಂಬ ಸಮೇತ ಕೊಲ್ಲೂರಿಗೆ ತೆರಳುವ ಮಾರ್ಗದಲ್ಲಿ ಹೆಬ್ರಿ ಯಲ್ಲಿ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ನೀಡಿದ ಗೌರವ ಸ್ವೀಕರಿಸಿ ಅವರು ಮಾತನಾಡುತಿದ್ದರು.

 ಬಿಜೆಪಿ ಯುವ ಮುಖಂಡ, ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ಗೆ ಉತ್ತಮ ಭವಿಷ್ಯವಿದ್ದು, ರಾಜ್ಯದಲ್ಲಿ ನಾಯಕರಾಗಿ ಬೆಳೆುಲಿದ್ದಾರೆ ಎಂದು ಭವಿಷ್ಯ ನುಡಿದರು.
 ಶಾಸಕ ಸುನೀಲ್ ಕುಮಾರ್, ಹೆಬ್ರಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಪುರ ಸುರೇಶ್ ಶೆಟ್ಟಿ, ಬಿಜೆಪಿ ಮುಖಂಡ ಎಚ್.ಸತೀಶ್ ಪೈ, ಚಾರ ರತ್ನಾಕರ ಶೆಟ್ಟಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸಮೃದ್ಧಿ ಪ್ರಕಾಶ ಶೆಟ್ಟಿ, ಜಿಪಂ ಸದಸ್ಯೆ ಜ್ಯೋತಿ ಹರೀಶ ಪೂಜಾರಿ, ತಾಪಂ ಸದಸ್ಯ ಶಿವಪುರ ರಮೇಶ್ ಕುಮಾರ್, ಗ್ರಾಪಂ ಅಧ್ಯಕ್ಷರಾದ ಹೆಬ್ರಿಯ ಎಚ್.ಸುಧಾಕರ ಹೆಗ್ಡೆ, ಶಿವಪುರದ ಸುಗಂಧಿ ನಾಯ್ಕೆ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News