×
Ad

ಗಾಂಜಾ ಮಾರಾಟ: ಇಬ್ಬರ ಬಂಧನ

Update: 2017-06-02 21:48 IST

ಮಂಗಳೂರು, ಜೂ. 2: ಗಂಜಿ ಮಠದ ಐಟಿ ಪಾರ್ಕ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಹಿತ ಇಬ್ಬರನ್ನು ಬಜ್ಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಕಾಸರಗೋಡಿನ ತಳಂಗೆರೆ ನಿವಾಸಿ, ಎಂಜಿನಿಯರಿಂಗ್ ವಿದ್ಯಾರ್ಥಿ ಮುಹಮ್ಮದ್ ಅಶ್ವದ್ (23) ಮತ್ತು ಭಟ್ರಕೆರೆ ಮಳಲಿ ಭಟ್ರಕೆರೆಯ ಅಜ್ಮಲ್ (20) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 95 ಗ್ರಾಂನ 10 ಪ್ಯಾಕೆಟ್ ಗಾಂಜಾ ಮತ್ತು 1ಬೈಕ್, 1 ಸ್ಕೂಟರ್ ಸೇರಿದಂತೆ ಒಟ್ಟು 61,500 ರೂ. ವೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಜ್ಪೆ ಠಾಣಾ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ಈ ಸಂದರ್ಭ ಗಾಂಜಾ ಮಾರಾಟ ಮಾಡಲೆಂದು ಬಂದ ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರಲ್ಲಿ ಅಶ್ವದ್ ಪರಾರಿಯಾದ ವ್ಯಕ್ತಿಗಳಿಂದ ಗಾಂಜಾ ಪಡೆದುಕೊಂಡಿದ್ದ ಎಂದು ಆರೋಪಿಸಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News