×
Ad

ಮೈಸೂರು: ದೇಶದಲ್ಲೇ ಪ್ರಪ್ರಥಮ ಸಾರ್ವಜನಿಕ ಸೈಕಲ್ ಬಳಕೆ ವ್ಯವಸ್ಥೆಗೆ ಸಿಎಂ ಚಾಲನೆ

Update: 2017-06-04 14:09 IST
ಬೆಂಗಳೂರು, ಜೂ.4: ದೇಶದಲ್ಲೇ ಮೊಟ್ಟಮೊದಲ ಸಾರ್ವಜನಿಕ ಸೈಕಲ್ ಬಳಕೆ ವ್ಯವಸ್ಥೆಗೆ (ಟ್ರಿಣ್ ಟ್ರಿಣ್) ಮೈಸೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಚಾಲನೆ ನೀಡಿದರು. ರಾಜ್ಯ ಸರಕಾರದ ನಗರ ಭೂ ಸಾರಿಗೆ ನಿರ್ದೇಶನಾಲಯ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಜಾರಿಗೆ ಬರುತ್ತಿರುವ ಈ ವ್ಯವಸ್ಥೆಗೆ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಸಾರ್ವಜನಿಕ ಸೈಕಲ್ ಬಳಕೆ ವ್ಯವಸ್ಥೆಯನ್ನು ಲೋಕಾರ್ಪಣೆ ಮಾಡಲಾಗಿದೆ. 1961ರಲ್ಲಿ ನಾನು ವಿದ್ಯಾಭ್ಯಾಸ ಮಾಡುವಾಗ ಮೈಸೂರಿನಲ್ಲಿ ಸೈಕಲ್‌ ನಲ್ಲೇ ಓಡಾಡುತ್ತಿದ್ದೆ. ಮೈಸೂರು ಸುಂದರವಾದ ನಗರ. ಈ ನಗರದ ಪರಿಸರ, ಸೌಂದರ್ಯ ಕಾಪಾಡುವುದು ಅತ್ಯವಶ್ಯ. ನಗರದಲ್ಲಿ 12 ಲಕ್ಷ ಜನಸಂಖ್ಯೆ ಇದ್ದು, ಆರೂವರೆ ಲಕ್ಷ ವಾಹನಗಳಿವೆ. ಜಗತ್ತಿನ 600 ನಗರಗಳಲ್ಲಿ ಸಾರ್ವಜನಿಕ ಸೈಕಲ್ ಬಳಕೆ ವ್ಯವಸ್ಥೆ ಇದ್ದು, ವಾಹನಗಳ ದಟ್ಟಣೆ, ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ನಾವು ಹೆಚ್ಚಾಗಿ ಪರಿಸರ ಸ್ನೇಹಿ ವಾಹನಗಳನ್ನು ಸಂಚಾರಕ್ಕೆ ಬಳಸುವುದು ಸೂಕ್ತ ಎಂದರು. ಮೈಸೂರಿನಲ್ಲಿ ಸಾರ್ವಜನಿಕ ಸೈಕಲ್ ಬಳಕೆ ವ್ಯವಸ್ಥೆ ಜಾರಿಗೆ ತಂದಿರುವುದು ನಗರದ ಜನರಿಗೆ ಒಳ್ಳೆಯ ಕೊಡುಗೆ. ಮುಂದೆ ಇದನ್ನು ಬೆಂಗಳೂರು ನಗರದಲ್ಲೂ ಈ ವ್ಯವಸ್ಥೆ ಜಾರಿಗೆ ತರುವ ಆಲೋಚನೆ ಇದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News