ರೈಲು ಹಳಿಗೆ ಬಿದ್ದು ವ್ಯಕ್ತಿ ಮೃತ್ಯು
Update: 2017-06-04 22:37 IST
ದಾವಣಗೆರೆ, ಜೂ.4: ನಗರದ ಅರುಣ ಚಿತ್ರಮಂದಿರದ ಬಳಿಯ ರೈಲ್ವೆ ಟ್ರಾಕ್ ಬಳಿ ವ್ಯಕ್ತಿಯೊಬ್ಬ ರೈಲು ಹಳಿಗೆ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ವರದಿಯಾಗಿದೆ.
ಇಲ್ಲಿನ ರೈಲ್ವೆ ಇಲಾಖೆಯ ಗ್ಯಾಂಗ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಹೊನ್ನಪ್ಪ (55) ಎಂಬಾತನೆ ಮೃತ ವ್ಯಕ್ತಿ. ಹೊನ್ನಪ್ಪ ಶುಕ್ರವಾರ ರಾತ್ರಿ ಊಟ ಮಾಡಿದ ನಂತರ ರೈಲು ಹಳಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಶನಿವಾರ ಬೆಳಗ್ಗೆ ಮೃತ ದೇಹ ಪತ್ತೆಯಾಗಿದೆ.
ಸಾವಿನ ಕುರಿತು ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.