×
Ad

ವಿಕಾಸ್ ಕಾಲೇಜಿನಲ್ಲಿ ಪುನರ್ಮನನ ಶಿಬಿರ

Update: 2017-06-04 23:44 IST

ಮಂಗಳೂರು, ಜೂ.4: ನಗರದ ವಿಕಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪುನರ್ಮನನ ಶಿಬಿರ ವನ್ನು ಆಯೋಜಸಲಾಯಿತು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಭೂಷಣ್ ಗುಲಾಬ್‌ರಾವ್ ಬೋರಸೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಪಡೆಯುವುದು ಕೇವಲ ಅಂಕಗಳನ್ನು ಗಳಿಸುವುದಕ್ಕೆ ಮಾತ್ರ ಸೀಮಿತವಾಗಿರಬಾರದು. ಜೀವನಕ್ಕೆ ಬೇಕಾದ ವೌಲ್ಯಗಳನ್ನು ಜೊತೆ ಜೊತೆಗೇ ಅಳವಡಿಸಿಕೊಂಡಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಎಂದು ಸಲಹೆ ನೀಡಿದರು. ಅತಿಥಿಗಳಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಆರ್ಥೋಪೆಡಿಕ್ ವಿಭಾಗ ಮುಖ್ಯಸ್ಥ ಡಾ.ಸುರೇಂದ್ರ ಕಾಮತ್ ಮಾತನಾಡಿ, ಏಕಾಗ್ರತೆ ಮತ್ತು ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಯೊಬ್ಬ ಗೆಲುವನ್ನು ಸಾಧಿಸಬಹುದು ಎಂದರು.
ಮಾಜಿ ಸಚಿವ ಹಾಗೂ ಕಾಲೇಜಿನ ಸ್ಥಾಪಕ ಅಧ್ಯಕ್ಷ ಜೆ.ಕೃಷ್ಣ ಪಾಲೆಮಾರ್ ಅಧ್ಯಕ್ಷ ವಹಿಸಿ ಮಾತನಾಡಿದರು.
ವಿಕಾಸ್ ಎಜ್ಯುಸೊಲ್ಯುಷನ್‌ನ ಸಲಹೆಗಾರ ಡಾ.ಅನಂತ್‌ಪ್ರಭು ಜಿ. ವಿಕಾಸ್‌ನ ಜೀವನದ ಕುರಿತು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಕೆಲವು ನಿದರ್ಶನಗಳನ್ನು ನೀಡಿ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.
ಕಾಲೇಜಿನ ಆಡಳಿತಾಧಿಕಾರಿ ವಿದ್ಯಾ ಕಾಮತ್ ವಿದ್ಯಾರ್ಥಿಗಳಿಗೆ ಕಾಲೇಜಿನ ನೀತಿ ನಿಯಮಗಳ ಕುರಿತು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಟಿ.ರಾಜರಾಮ್ ರಾವ್, ವಿಕಾಸ್ ಎಜು ಕೇಶನ್ ಟ್ರಸ್ಟ್‌ನ ಟ್ರಸ್ಟಿಗಳಾದ ಜೆ.ಕೊರಗಪ್ಪ, ಸೂರಜ್ ಕಲ್ಯ ಉಪಸ್ಥಿತರಿದ್ದರು. ಆರ್ಟ್ ಆಫ್ ಲಿವಿಂಗ್‌ನ ಸಕ್ರಿಯ ಸದಸ್ಯೆ ಡಾ.ವಿನಯ ಪೂರ್ಣಿಮಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕನ್ನಡ ಉಪನ್ಯಾಸಕಿ ಶೋಭಾ ಪಿ. ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಐಶ್ವರ್ಯಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News