×
Ad

ಜೂ.12 :ಕಾಂಗ್ರೆಸ್ ಪ್ರತಿಭಟನೆ

Update: 2017-06-05 17:08 IST

ಮಡಿಕೇರಿ,ಜೂ.5 : ಕೇಂದ್ರದ ನಿಲುವನ್ನು ಖಂಡಿಸಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ.12 ರಂದು ಭಾಗಮಂಡಲದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿರುವುದಾಗಿ ತಿಳಿಸಿದ ಅವರು ಸೂಕ್ಷ್ಮ ಪರಿಸರ ವಲಯಕ್ಕೆ ಸಂಬಂಧಿಸಿದಂತೆ ರಚಿಸಿಕೊಂಡಿರುವ ರಾಜಕಿಯೇತರ ವೇದಿಕೆಯಿಂದ ವಿಷಯದ ಒಳಹೊರಗಿನ ವಿಚಾರಗಳು ಜನರಿಗೆ ತಿಳಿಯವುದು ಅಸಾಧ್ಯವಾಗಿದೆ. ಆದ್ದರಿಂದ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ಸೂಕ್ಷ್ಮ ಪರಿಸರ ವಲಯ ಘೋಷಣೆಯ ಸತ್ಯವನ್ನು ಜನರ ಮುಂದಿಡಲಿದೆ ಎಂದು ಸ್ಪಷ್ಟಪಡಿಸಿದರು.

ಪ್ರತಾಪ್ ಸಿಂಹ ರಾಜಿನಾಮೆ ನೀಡಲಿ 
ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ನೋಡಿಕೊಳ್ಳುವ ಜವಬ್ದಾರಿಯನ್ನು ನನ್ನ ಹೆಗಲ ಮೇಲೆ ಹಾಕಿ, ನೀವು ನಿಶ್ಚಿಂತರಾಗಿರಿ ಎಂದು ಭರವಸೆ ನೀಡಿದ್ದ ಸಂಸದ ಪ್ರತಾಪ ಸಿಂಹ ಅವರ ರಾಜೀನಾಮೆಯನ್ನು ಬಿಜೆಪಿ ಯುವ ಮೋರ್ಚಾ ಮೊದಲು ಪಡೆಯಲಿ ಎಂದು ರಮಾನಾಥ್ ಒತ್ತಾಯಿಸಿದರು.

 ಭಾಗಮಂಡಲ ಗ್ರಾಮ ಸಭೆಯನ್ನು ಬಹಿಷ್ಕರಿಸುವ ಬದಲು ಮುಂದಿನ ಮುಂಗಾರು ಅಧಿವೇಶನವನ್ನು ಸಂಸದರು ಬಹಿಷ್ಕರಿಸುವಂತೆ ಬಿಜೆಪಿ ಸಂಸದರ ಮೇಲೆ ಒತ್ತಡ ಹೇರಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಪತ್ರಾವೋ ಮಾತನಾಡಿ, ತಲಕಾವೇರಿ ವನ್ಯಧಾಮ ವ್ಯಾಪ್ತಿಯ ವಿವಿಧ ಗ್ರಾಮಗಳನ್ನು ಸೂಕ್ಷ್ಮ ಪರಿಸರ ವಲಯವನ್ನಾಗಿ ಘೋಷಣೆ ಮಾಡಿರುವುದರಿಂದ ಬಿಜೆಪಿ ಮುಖಭಂಗಕ್ಕೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ ಅವರು, ಸೂಕ್ಷ್ಮ ಪರಿಸರ ವಲಯ ಘೋಷಣೆಗೆ ರಾಜ್ಯ ಸರ್ಕಾರದ ವೈಫಲ್ಯ ಕಾರಣವೆಂದು ಕಾರಣ ನೀಡಿ ಜೂ.6 ರ ಭಾಗಮಂಡಲ ಗ್ರಾಮ ಸಭೆಯನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ. ಆದರೆ, ಈ ಗ್ರಾಮ ಪಂಚಾಯ್ತಿಯಲ್ಲಿ ಬಿಜೆಪಿ ಬೆಂಬಲಿಗರೆ ಅಧಿಕಾರದಲ್ಲಿದ್ದಾರೆ ಎಂದು ಟೀಕಿಸಿದರು.

 ಗ್ರಾಮ ಸಭೆಯಲ್ಲಿ ಜನಸಾಮಾನ್ಯರು ಪಾಲ್ಗೊಂಡು ಕಸ್ತೂರಿ ರಂಗನ್ ವರದಿಯ ಕುರಿತು ಚರ್ಚೆಗಳು ನಡೆಯಬೇಕಾಗಿದೆ. ಇದನ್ನು ತಡೆಹಿಡಿಯುವ ಷಡ್ಯಂತ್ರದ ಭಾಗವಾಗಿ ಬಿಜೆಪಿ ಯುವ ಮೋರ್ಚಾ ಗ್ರಾಮ ಸಭೆಯ ಬಹಿಷ್ಕಾರಕ್ಕೆ ಮುಂದಾಗಿದೆಯೆಂದು ಆರೋಪಿಸಿದರು.

ಗ್ರಾಮ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡು ಸೂಕ್ಷ್ಮ ಪರಿಸರ ವಲಯ ಘೋಷಣೆಗೆ ಸಂಚು ನಡೆಸಿದವರ ಬಣ್ಣವನ್ನು ಬಯಲು ಮಾಡಬೇಕೆಂದು ಸುನಿಲ್ ಪತ್ರಾವೋ ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ನ ಕಿಸಾನ್ ಘಟಕದ ಅಧ್ಯಕ್ಷ ಡಿ.ಎನ್. ಹರ್ಷ, ಕರಿಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎನ್. ಬಾಲಚಂದ್ರನಾಯರ್, ಚೆಟ್ಟಿಮಾನಿ ಗ್ರಾಪಂ ಸದಸ್ಯ ಹ್ಯಾರಿಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ರವೀಂದ್ರ ಕುಮಾರ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News