ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ
Update: 2017-06-05 20:48 IST
ಉಡುಪಿ, ಜೂ.5: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ವತಿಯಿಂದ ಆರಂಭಿಸಲಾದ ರಾಷ್ಟ್ರೀಯ ಆರೋಗ್ಯ ಅಭಿಯಾನ ‘ರಾಷ್ಟ್ರೀಯ ಸಂಚಾರಿ ಆರೋಗ್ಯ ಘಟಕ’ ಸೇವೆಯನ್ನು ಕಾರ್ಕಳ ತಾಲೂಕಿನಲ್ಲಿ ಕಾರ್ಕಳ ಶಾಸಕ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್.ಕೋಟ್ಯಾನ್, ತಾಪಂ ಅಧ್ಯಕ್ಷೆ ಮಾಲಿನಿ ಜೆ ಶೆಟ್ಟಿ, ಜಿಪಂ ಸದಸ್ಯರಾದ ಜ್ಯೋತಿ ಹರೀಶ್, ರೇಷ್ಮಾ ಶೆಟ್ಟಿ, ದಿವ್ಯಶ್ರೀ ಅಮೀನ್ ಹಾಗೂ ತಾಪಂ ಸದಸ್ಯರು ಉಪಸ್ಥಿತರಿದ್ದರು.