×
Ad

ಡಿಪ್ಲೋಮಾ ಕೋರ್ಸು ಪ್ರವೇಶಕ್ಕೆ ಅವಧಿ ವಿಸ್ತರಣೆ

Update: 2017-06-05 22:16 IST

 ಬೆಂಗಳೂರು, ಜೂ. 5: 2017-18ನೆ ಸಾಲಿಗೆ ಸರಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಎಸೆಸೆಲ್ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೆ ಶೇ.35 ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಮತ್ತು ಸ್ವೀಕರಿಸಲು ಅಂತಿಮ ಜೂ.7ರ ವರೆಗೆ ವಿಸ್ತರಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್‌ನಿಂದ ಅರ್ಜಿ ಪಡೆಯಲು, ಭರ್ತಿ ಮಾಡಿದ ಅರ್ಜಿಯನ್ನು ಮೂಲ ದಾಖಲೆಗಳ ಪರಿಶೀಲನೆಯೊಂದಿಗೆ ರಾಜ್ಯದಲ್ಲಿನ 121 ಸರಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ದಾಖಲೆ ಪರಿಶೀಲನೆ ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಕೆ ಕೇಂದ್ರ ಗಳಲ್ಲಿ ಆನ್‌ಲೈನ್‌ನಲ್ಲಿ ಸಲ್ಲಿಸಲು ಜೂ. 7ರ ಸಂಜೆ 5 ಗಂಟೆಯ ವರೆಗೆ ಅವಧಿಯನ್ನು ವಿಸ್ತರಿಸಿದೆ.ಹೆಚ್ಚಿನ ಮಾಹಿತಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ ಅನ್ನು ವೀಕ್ಷಿಸಲು ಪ್ರಕಟಣೆ ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News