ಸಿಇಟಿ-ಕೆಇಎ ಪೂರ್ವ ಸಮಾಲೋಚನೆ ಕಾರ್ಯಕ್ರಮ
ಕುಂದಾಪುರ, ಜೂ.5: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವತಿಯಿಂದ ಸಿಇಟಿ-ಕೆಇಎ ಪೂರ್ವ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವು ಕುಂದಾಪುರದ ಭಂಡಾರ್‌ಕಾರ್ಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಜಿ.ಎಂ. ಗೋಂಡ ಉದ್ಘಾಟಿಸಿದರು. ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ತಿರುಮಲೇಶ್ವರ ಭಟ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಯುವ ಸಿಇಟಿ ಪ್ರವೇಶ ಪ್ರಕ್ರಿಯೆಯ ಸಮಗ್ರ ಮಾಹಿತಿ ನೀಡಿದರು.
ಗಣಕಯಂತ್ರ ವಿಭಾಗದ ಮುಖ್ಯಸ್ಥ ಪ್ರೊ.ವಾಸುದೇವ ಪಿಯುಸಿ ನಂತರದಲ್ಲಿ ತೆಗೆದುಕೊಳ್ಳಬಹುದಾದ ವಿವಿಧ ಕೋರ್ಸ್‌ಗಳು ಮತ್ತು ಆ ಮೂಲಕ ಭವಿಷ್ಯ ದಲ್ಲಿ ವೃತ್ತಿಪರರಾಗುವ ಅವಕಾಶಗಳ ಬಗ್ಗೆ ವಿವರಿಸಿದರು. ಯಾಂತ್ರಿಕ ವಿಭಾಗದ ಸಹಾಯಕ ಪ್ರಾಧ್ಯಾಪಕ ಕಿಶೋರ್ ಕುಮಾರ್ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಬಗ್ಗೆ ವಿವರಿಸಿದರು.ಈ ಸಂದರ್ಭದಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯದಲ್ಲಿ ಅತ್ಯಧಿಕ ಅಂಕ ಗಳಿಸಿದ ರಾಧಿಕಾ ಅವರನ್ನು ಅಭಿನಂದಿಸಲಾಯಿತು. ಗಣಕಯಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಮ್ಯಶ್ರೀ ಮತ್ತು ಶೈಲಿ ಮೆಲಿಟಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.