ಭೋಪಾಲ್: ಪೆಂಡಾಲ್ ಕುಸಿದು 23 ಜನರಿಗೆ ಗಾಯ
Update: 2017-06-05 23:28 IST
ಇಂದೋರ್, ಜೂ.5: ಸೋಮವಾರ ಸಂಜೆ ಇಲ್ಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾಗವಹಿಸಿದ ಕಾರ್ಯಕ್ರಮದ ಪೆಂಡಾಲ್ ಭಾರೀ ಮಳೆಯಿಂದ ಕುಸಿದು ಬಿದ್ದಿದ್ದು, ಕನಿಷ್ಠ 23 ಜನರು ಗಾಯಗೊಂಡಿದ್ದಾರೆ.
ವೇದಿಕೆಯಲ್ಲಿದ್ದ ಮಹಾಜನ್, ನಾಯ್ಡು ಮತ್ತು ಚೌಹಾಣ್ ಸೇರಿದಂತೆ ಎಲ್ಲ ಗಣ್ಯರು ಅಪಾಯದಿಂದ ಪಾರಾಗಿದ್ದಾರೆ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಅಜಯ್ ದೇವ್ ಶರ್ಮಾ ತಿಳಿಸಿದರು.