ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ
Update: 2017-06-07 20:45 IST
ಮಂಗಳೂರು, ಜೂ.7: ಕರ್ನಾಟಕ ಕರಾವಳಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗಿರುವುದರಿಂದ ಅನಾಹುತವನ್ನು ತಡೆಯುವ ಸಲುವಾಗಿ ಯಾವುದೇ ನಾಡದೋಣಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.