×
Ad

ಎಂಡೋಸಲ್ಫಾನ್ ಸಂತ್ರಸ್ತರ ಗುರುತಿಸುವಿಕೆ ಶಿಬಿರ

Update: 2017-06-07 20:46 IST

ಮಂಗಳೂರು, ಜೂ.7: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಜೂನ್ 9 ರಂದು ಪೂರ್ವಾಹ್ನ 10 ರಿಂದ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಗುರುತಿಸುವಿಕೆ ಶಿಬಿರವನ್ನು ಆಯೋಜಿಸಲಾಗಿದೆ.

ಸಂಭಾವನೀಯ ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದಲ್ಲಿ ಪಾಲ್ಗೊಂಡು ತಪಾಸಣೆಗೊಳಪಟ್ಟು ಸರಕಾರದಿಂದ ಸಿಗುವ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News