×
Ad

ಹತ್ತು ವಸತಿ ಕಾಲೇಜುಗಳ ಆರಂಭ: ಸಚಿವ ರಾಯರೆಡ್ಡಿ

Update: 2017-06-07 20:57 IST

ಬೆಂಗಳೂರು, ಜೂ. 7: ರಾಜ್ಯದಲ್ಲಿ ಹೊಸದಾಗಿ ಹತ್ತು ವಸತಿ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಹಿರಿಯ ಸದಸ್ಯ ಡಿ.ಸಿ.ತಮ್ಮಣ್ಣ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಹೊಸದಾಗಿ ಪ್ರಥಮ ದರ್ಜೆ ಕಾಲೇಜುಗಳನ್ನು ಆರಂಭಿಸುವ ಪ್ರಸ್ತಾವನೆ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 412 ಪ್ರಥಮ ದರ್ಜೆ ಕಾಲೇಜುಗಳ ಪೈಕಿ 70ಕ್ಕೂ ಕಡಿಮೆ ಪ್ರವೇಶಾತಿ ಇರುವ 10ರಿಂದ 15 ಕಾಲೇಜುಗಳಿದ್ದು, ಅವುಗಳನ್ನು ಸ್ಥಳಾಂತರಿಸುವ ವೇಳೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕಸ್ತೂರಿಗೆ ಪ್ರಥಮ ದರ್ಜೆ ಕಾಲೇಜು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.
ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ತಮ್ಮಣ್ಣ, ಕಸ್ತೂರಿ ಗ್ರಾಮದಲ್ಲಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಹತ್ತು ಎಕರೆ ಭೂಮಿ ನೀಡಿದ್ದು, ಕಾಲೇಜಿನ ಅಗತ್ಯ ಇದೆ. ಆ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೆಸ್ತೂರಿನಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಬೇಕು ಎಂದು ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News