ತಡೆಯಾಜ್ಞೆ ಕೋರಿದ್ದ ನ್ಯಾ.ಕರ್ಣನ್ ,ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Update: 2017-06-07 15:50 GMT

ಹೊಸದಿಲ್ಲಿ,ಜೂ.7: ಮೇ 9ರಿಂದಲೂ ಬಂಧನವನ್ನು ತಪ್ಪಿಸಿಕೊಳ್ಳುತ್ತಿರುವ ಕಲ್ಕತ್ತಾ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಿ.ಎಸ್.ಕರ್ಣನ್ ಅವರು ನ್ಯಾಯಾಂಗ ನಿಂದನೆಗಾಗಿ ತನಗೆ ಆರು ತಿಂಗಳ ಜೈಲುಶಿಕ್ಷೆಯನ್ನು ವಿಧಿಸಿ ಹೊರಡಿಸಲಾಗಿರುವ ಆದೇಶಕ್ಕೆ ತಡೆಯಾಜ್ಞೆಯನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ಬುಧವಾರ ತಿರಸ್ಕರಿಸಿದೆ.

ನ್ಯಾ.ಕರ್ಣನ್ ಪರ ನ್ಯಾಯವಾದಿ ಮ್ಯಾಥ್ಯೂಸ್ ಜೆ.ನೆಡುಂಪಾರಾ ಅವರು ನ್ಯಾಯಮೂರ್ತಿಗಳಾದ ಅಶೋಕ ಭೂಷಣ್ ಮತ್ತು ದೀಪಕ್ ಗುಪ್ತಾ ಅವರನ್ನೊಳ ಗೊಂಡ ರಜಾಕಾಲ ಪೀಠದೆದುರು ವಿಷಯವನ್ನು ಉಲ್ಲೇಖಿಸಿದ್ದು, ನ್ಯಾ.ಕರ್ಣನ್ ಅವರನ್ನು ಬಂಧಿಸುವಂತೆ ಏಳು ನ್ಯಾಯಾಧೀಶರ ವಿಶೇಷ ಪೀಠವು ಪಶ್ಚಿಮ ಬಂಗಾಳ ಪೊಲೀಸರಿಗೆ ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಪೀಠವು ನಿರಾಕರಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News