ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಉಡುಪಿ, ಜೂ.7: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸಂಘ, ವಕೀಲರ ಸಂಘ ಉಡುಪಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಜೂ.12ರಂದು ಬೆಳಗ್ಗೆ 10 ಗಂಟೆಗೆ ಅಂಬಲಪಾಡಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟೇಶ ನಾಯ್ಕ ಟಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ವಹಿಸುವರು.
ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ಟಿ.ಬಾಲಕೃಷ್ಣ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ಕೆ. ನಾರಾಯಣ, ನಗರಸಭೆ ಪೌರಾಯುಕ್ತ ಮಂಜುನಾಥಯ್ಯ, ವಕೀಲರ ಸಂಘದ ಅಧ್ಯಕ್ಷ ಎಚ್.ರತ್ನಾಕರ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಪುರುಷೋತ್ತಮ ಪಿ.ಕೆ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಸರಕಾರಿ ವಕೀಲ ಮಹಮ್ಮದ್ ಸುಹಾನ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.