ಶಾಸ್ತ್ರಿ ಪರ ಕೊಹ್ಲಿ ಬ್ಯಾಟಿಂಗ್
Update: 2017-06-07 23:24 IST
ಹೊಸದಿಲ್ಲಿ, ಜೂ.7: ಭಾರತದ ನಾಯಕ ವಿರಾಟ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಲು ಇಂಗ್ಲೆಂಡ್‌ಗೆ ತೆರಳುವ ಮೊದಲೇ ರವಿ ಶಾಸ್ತ್ರಿ ಅವರನ್ನು ಕೋಚ್ ಅಭ್ಯರ್ಥಿಯನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ.
ಮೇ 23 ರಂದು ಇಂಗ್ಲೆಂಡ್‌ಗೆ ತೆರಳುವ ಮೊದಲು ಕ್ರಿಕೆಟ್ ಸಲಹಾ ಸಮಿತಿಯ ಸದಸ್ಯರುಗಳಾದ ಸಚಿನ್ ತೆಂಡುಲ್ಕರ್ ಹಾಗೂ ವಿವಿಎಸ್ ಲಕ್ಷ್ಮಣ್‌ರನ್ನು ಭೇಟಿಯಾಗಿದ್ದ ಕೊಹ್ಲಿ ಅವರು ಶಾಸ್ತ್ರಿಯವರನ್ನು ಸಂದರ್ಶನದ ಪ್ರಕ್ರಿಯೆಗೆ ಆಹ್ವಾನಿಸುವಂತೆ ಕೋರಿದ್ದರು ಎಂದು ತಿಳಿದುಬಂದಿದೆ.
ಆದರೆ, ಶಾಸ್ತ್ರಿ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಹಾಗಾಗಿ ಅವರನ್ನು ಸಂದರ್ಶನಕ್ಕೆ ಆಹ್ವಾನಿಸುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.