ಕ್ಯಾಲಿಫೋರ್ನಿಯಾ: ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ

Update: 2017-06-08 12:34 GMT

ಹೈದರಾಬಾದ್, ಜೂ.8: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ವಿದ್ಯಾರ್ಥಿಯೋರ್ವನ ಮೇಲೆ ಗುಂಡಿನ ದಾಳಿ ನಡೆದಿದೆ. ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ.

ಕ್ಯಾಲಿಫೋರ್ನಿಯಾ ಯುನಿವರ್ಸಿಟಿಯ ವಿದ್ಯಾರ್ಥಿಯಾಗಿರುವ ಮುಬೀನ್ ಅಹ್ಮದ್ ಗೆ ಆತ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದ ಅಂಗಡಿಯೊಂದರಲ್ಲಿ ಗುಂಡಿಕ್ಕಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮುಬೀನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯಿಂದ ಕರೆ ಬಂದ ನಂತರ ಈ ವಿಷಯ ತಿಳಿಯಿತು ಎಂದಿದ್ದಾರೆ ಮುಬೀನ್ ರ ತಂದೆ ಮುಜೀಬ್.

“ನನ್ನ ಪುತ್ರ ಗಂಭೀರಾವಸ್ಥೆಯಲ್ಲಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಆಸ್ಪತ್ರೆಯ ಅಧಿಕಾರಿಗಳು ಕರೆ ಮಾಡಿದ್ದರು. ನಾವು ಅವನೊಂದಿಗಿರಲು ವೀಸಾದ ಅವಶ್ಯಕತೆಯಿದೆ” ಎಂದವರು ಹೇಳಿದ್ದಾರೆ.

ಈ ಬಗ್ಗೆ ಎಂಬಿಟಿ ನಾಯಕ ಅಮ್ಜದುಲ್ಲಾ ಖಾನ್ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News