ಅಲ್ಪಸಂಖ್ಯಾತ ಸಂಸ್ಥೆಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ
Update: 2017-06-08 18:37 IST
ದಾವಣಗೆರೆ : 2017-18 ನೇ ಸಾಲಿಗೆ ಕರ್ನಾಟಕ ರಾಜ್ಯದಲ್ಲಿರುವ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) ಸಂಸ್ಥೆಗಳ ವತಿಯಿಂದ ನಡೆಸಲಾಗುವ ಅನಾಥಾಶ್ರಮ, ವೃದ್ಧಾಶ್ರಮ, ಏಡ್ಸ್, ವಿಕಲಚೇತನ ಆಶ್ರಮಧಾಮಗಳಿಗೆ ಸಹಾಯಧನ ಮಂಜೂರು ಮಾಡಲು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಸ್ಥೆಗಳು ಪ್ರಸ್ತಾವನೆಯನ್ನು ತಯಾರಿಸಿ, ತಪಾಸಣಾ ವರದಿ ಹಾಗೂ ಸೂಕ್ತ ಶಿಫಾರಸ್ಸಿನೊಂದಿಗೆ ನಿರ್ದೇಶನಾಲಯ್ಕೆ ಸಲ್ಲಿಸಬೇಕು. ಹಾಗೂ ಈ ಸಂಸ್ಥೆಗಳ ವ್ಯವಸ್ಥಾಪಕ ಸಮಿತಿಯವರು ಅರ್ಜಿ ನಮೂನೆ, ಲಗತ್ತಿಸಬೇಕಾದ ವಿವರಗಳನ್ನು ಈ ಕಛೇರಿಯಿಂದ ಪಡೆದು ಪ್ರಸ್ತಾವನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 44, ಎ ಬ್ಲಾಕ್, 2ನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ ಈ ಕಛೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಈ ಕಛೇರಿ ಹಾಗೂ ದೂರವಾಣಿ ಸಂಖ್ಯೆ: 08192-250022 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.