×
Ad

ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Update: 2017-06-08 21:20 IST

ಉಡುಪಿ, ಜೂ.8: ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಪದವಿ /ಪಿಎಚ್‌ಡಿ/ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.3 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ -www.backwardclasses.kar.nic.in- ಇಲಾಖೆ ವೆಬ್‌ಸೈಟ್ ನ್ನು ನೋಡುವಂತೆ ಅಥವಾ ದೂರವಾಣಿ:0820-2574881ನ್ನು ಸಂಪರ್ಕಿ ಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News