ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ
Update: 2017-06-08 21:54 IST
ಮಂಗಳೂರು, ಜೂ.8: ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಬಾಲಕರ ವಿದ್ಯಾರ್ಥಿನಿಲಯ ಪಡೀಲ್, ಬಾಲಕಿಯರ ವಿದ್ಯಾರ್ಥಿನಿಲಯ ಚಿಲಿಂಬಿ, ಬೆಂಜನಪದವು, ಕಡಬ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಲಯ ದೇರಳಕಟ್ಟೆ ಮತ್ತು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಗುರು ಕಂಬಳದಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಅಥವಾ ಆಯಾಯ ತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರಗಳಲ್ಲಿ ಪಡೆಯಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಪ್ರಕಟನೆ ತಿಳಿಸಿದೆ.