ಹಳ್ಳಕ್ಕೆ ನುಗ್ಗಿದ ಬಸ್: 14 ಜನರಿಗೆ ಗಾಯ
Update: 2017-06-09 19:31 IST
ನಾಗಮಂಗಲ, ಜೂ. 9: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ರಸ್ತೆ ಪಕ್ಕದ ಹಳ್ಳಕ್ಕೆ ಚಲಿಸಿ ನಿರ್ವಾಹಕ ಸೇರಿದಂತೆ 14 ಪ್ರಯಾಣಿಕರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಹಟ್ಣ ಗ್ರಾಮದ ಬಳಿ ಶುಕ್ರವಾರ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಚಲಿಸುತ್ತಿದ್ದ ಬಸ್, ಟೈರ್ ಪಂಕ್ಚರ್‌ನಿಂದಾಗಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ಹಳ್ಳಕ್ಕೆ ನುಗ್ಗಿ ಈ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಸಮೀಪದ ಬೆಳ್ಳೂರು ಕ್ರಾಸ್‌ನಲ್ಲಿರುವ ಆಸ್ಪತ್ರೆಗೆ ಸೇರಿಸಲಾಗಿದ್ದು, ಈ ಸಂಬಂಧ ಬೆಳ್ಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.