ಕಾರ್ಯಕರ್ತರು ಭೂತ್ ಮಟ್ಟದಲ್ಲಿ ಮುನ್ನಡೆಯನ್ನು ಕಾಯ್ದುಕೊಳ್ಳಬೇಕು : ಬಿ.ವೈ ರಾಘವೇಂದ್ರ
ಶಿಕಾರಿಪುರ,ಯಡಿಯೂರಪ್ಪನವರ ಯಕತ್ವದ ಗುಣಗಳನ್ನು ಅರಿತು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದ್ದು,ಪಕ್ಷ ಅಧಿಕಾರಗಳಿಸಲು ಕಾರ್ಯಕರ್ತರು ೂ ಮಟ್ಟದಲ್ಲಿ ಮುನ್ನಡೆಯನ್ನು ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಗಿದೆ ಎಂದು ಶಾಸಕ ಬಿ.ವೈ ರಾಘವೇಂದ್ರ ತಿಳಿಸಿದರು.
ಶುಕ್ರವಾರ ತಾಲೂಕಿನ ಅಂಬಾರಗೊಪ್ಪ ಗ್ರಾಮದ ಸಮುದಾಯಭವನದಲ್ಲಿ ನಡೆದ ಕಪ್ಪನಹಳ್ಳಿ ಶಕ್ತಿ ಕೇಂದ್ರದ ಭೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನಿಯಾಗಿ ನರೇಂದ್ರಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಗಳಿಸಿದ ನಂತರದಲ್ಲಿ ದೇಶಾದ್ಯಂತ ನಡೆದ 16 ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ 11 ರಲ್ಲಿ ಪಕ್ಷ ಅಧಿಕಾರಗಳಿಸಿದ್ದು ಕಾಂಗ್ರೆಸ್ ಕೇವಲ ಒಂದು ರಾಜ್ಯದಲ್ಲಿ ಅಧಿಕಾರಕ್ಕೆ ತೃಪ್ತಿಪಟ್ಟುಕೊಂಡು ಉಳಿದ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಗಳಿಸಿದೆ ಎಂದು ತಿಳಿಸಿದರು.
11 ರಾಜ್ಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಚುನಾವಣೆಯನ್ನು ಎದುರಿಸಿದ ಬಿಜೆಪಿ ರಾಜ್ಯದಲ್ಲಿ ಯಡಿಯೂರಪ್ಪನವರ ನಾಯಕತ್ವ ಗುಣವನ್ನು ಅರಿತು ರಾಜ್ಯದಲ್ಲಿ ಪಕ್ಷ ಮುನ್ನಡೆಸಲು ಸಮರ್ಥ ವ್ಯಕ್ತಿ ಎಂದರಿತು ಹೈಕಮಾಂಡ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದೆ ಎಂದ ಅವರು ಯಡಿಯೂರಪ್ಪನವರ ಯಶಸ್ಸಿಗೆ ತಾಲೂಕಿನ ಪಕ್ಷದ ಮುಖಂಡರು,ಭೂತ್ ಮಟ್ಟದ ಕಾರ್ಯಕರ್ತರು ಪ್ರಮುಖ ಕಾರಣ ಎಂದು ತಿಳಿಸಿದರು.
ವೇದಿಕೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಆರ್.ಕೆ ಸಿದ್ರಾಮಣ್ಣ,ತಾ.ಬಿಜೆಪಿ ಅಧ್ಯಕ್ಷ ರೇವಣಪ್ಪ, ಕಪ್ಪನಹಳ್ಳಿ ಶಕ್ತಿ ಕೇಂದ್ರದ ಅಧ್ಯಕ್ಷ ಮಲ್ಲೇಶಪ್ಪ,ಪ್ರಕಾಶ್,ಶಾಂತಪ್ಪ ಮತ್ತಿತರರು ಉಪಸ್ಥಿತರಿದ್ದರು.