ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2017-06-09 15:16 GMT

ಉಡುಪಿ, ಜೂ.9: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿ ಗಳಿಂದ 2017-18ನೇ ಸಾಲಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
 www.backwardclasses.kar.nic.in

  ಪ್ರ.ವರ್ಗ-1, ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗೆ, ಪ್ರವರ್ಗ 2ಎ, 2 ಬಿ, 3ಎ,3ಬಿ ಇತರೆ ಹಿಂದುಳಿದ ವರ್ಗ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 1 ಲಕ್ಷದ ಮಿತಿಯಲ್ಲಿರಬೇಕು. ಅರ್ಜಿಯನ್ನು ನಲ್ಲಿ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.12 ಕೊನೆಯ ದಿನವಾಗಿದೆ. ಪ್ರ.ವರ್ಗ-1, ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗೆ, ಪ್ರವರ್ಗ 2ಎ, 2 ಬಿ, 3ಎ,3ಬಿ ಇತರೆ ಹಿಂದುಳಿದ ವರ್ಗ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 1 ಲಕ್ಷದ ಮಿತಿಯಲ್ಲಿರಬೇಕು. ಅರ್ಜಿಯನ್ನು ನಲ್ಲಿ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.12 ಕೊನೆಯ ದಿನವಾಗಿದೆ. ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್-www.backwardclasses.kar.nic.in ನೋಡಬಹುದು. ಹೆಚ್ಚಿನ ಮಾಹಿತಿಗಳಿಗಾಗಿ ಜಿಲ್ಲಾ/ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಹಾಗೂ ದೂ.ಸಂ.080-65970006ನಲ್ಲಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News