ಶೀಘ್ರದಲ್ಲಿಯೇ 1021 ಶಿಕ್ಷಕರ ನೇಮಕ: ತನ್ವೀರ್ ಸೇಠ್
ಬೆಂಗಳೂರು, ಜೂ.9: ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ 1021 ಶಿಕ್ಷಕರ ಹಾಗೂ ದೈಹಿಕ ಶಿಕ್ಷಕರನ್ನು ಶೀಘ್ರದಲ್ಲಿಯೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ಶುಕ್ರವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯೆ ತಾರಾ ಅನೂರಾಧ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಶಿಕ್ಷಣ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿಯಿದ್ದು, ಸದ್ಯ ಸರಕಾರ ಒಟ್ಟು 1021 ಶಿಕ್ಷಕ, ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಹೇಳಿದರು.
ಅಲ್ಲದೆ, ರಾಜ್ಯ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 957 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳ ನೇಮಕಾತಿ ಮಾಡುವ ಪ್ರಸ್ತಾವನೆಯು ಆರ್ಥಿಕ ಇಲಾಖೆಯೊಡನೆ ಸಮಾಲೋಚನೆಯಲ್ಲಿದೆ. ಹಾಗೂ ಸರಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ 469 ಹುದ್ದೆಗಳ ಪೈಕಿ 148 ಹುದ್ದೆಗಳನ್ನು 2017ರ ಎಪ್ರಿಲ್ ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.