×
Ad

ವಾಜಪೇಯಿ ವಸತಿ ಯೋಜನೆಯಡಿಯ ಮನೆಗಳಿಗೆ ಸಹಾಯಧನ ಹೆಚ್ಚಳ: ಎಂ.ಕೃಷ್ಣಪ್ಪ

Update: 2017-06-09 21:00 IST

ಬೆಂಗಳೂರು, ಜೂ.9: ವಾಜಪೇಯಿ ನಗರ ವಸತಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಪ್ರತಿ ಮನೆಗೆ ಸದ್ಯ 1 ಲಕ್ಷ 20 ಸಾವಿರ ರೂ.ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಹಣವನ್ನು ಹೆಚ್ಚಳ ಮಾಡಲಾಗುವುದು ಎಂದು ವಸತಿ ಸಚಿವ ಎಂ.ಕೃಷ್ಣಪ್ಪ ಹೇಳಿದ್ದಾರೆ.

ಶುಕ್ರವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಕಾಂತರಾಜು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ವಾಜಪೇಯಿ ನಗರ ವಸತಿ ಯೋಜನೆಗೆ ತುಮಕೂರು ಜಿಲ್ಲೆಗೆ 12.27 ಕೋಟಿ ರೂ.ಅನುದಾನ ಖರ್ಚು ಮಾಡಲಾಗಿದ್ದು, ಈಗಾಗಲೇ 888 ಮನೆಗಳನ್ನು ನಿರ್ಮಿಸಲಾಗಿದೆ. ಅಲ್ಲದೆ, ನಿಮ್ಮ ಸಲಹೆಯಂತೆ ಪ್ರತಿ ಮನೆ ನಿರ್ಮಾಣಕ್ಕೆ ಹಣವನ್ನು ಹೆಚ್ಚಳ ಮಾಡುವುದಾಗಿ ತಿಳಿಸಿದರು.
        

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News