ತನ್ವೀರ್‌ಸೇಠ್-ಮಂಜುನಾಥ್ ನಡುವೆ ವಾಗ್ವಾದ?
ಬೆಂಗಳೂರು, ಜೂ.9: ಉಪನ್ಯಾಸಕರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್‌ಸೇಠ್ ನಡುವೆ ಪರಸ್ಪರ ವಾಗ್ವಾದ ನಡೆದಿದೆ ಎನ್ನಲಾಗಿದೆ.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲಿ ಈ ಘಟನೆ ಜರುಗಿದೆ ಎಂದು ತಿಳಿದು ಬಂದಿದೆ.
ಹುಣಸೂರು ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಉಪನ್ಯಾಸಕರಾಗಿದ್ದ ಮಂಜೇಗೌಡ ಎಂಬವರು ಕಾಲೇಜಿನಲ್ಲಿ 150 ವಿದ್ಯಾರ್ಥಿಗಳಿದ್ದರೂ, ಇಲ್ಲಿ ಮಾಡಲು ಕೆಲಸವಿಲ್ಲವೆಂದು ಸಚಿವರ ಬಳಿ ಪ್ರಭಾವ ಬಳಸಿ ಮೈಸೂರಿನ ಮಹಾರಾಣಿ ಕಾಲೇಜಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಇದರಿಂದಾಗಿ, ಹುಣಸೂರು ಕಾಲೇಜಿನ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ ಎಂದು ಮಂಜುನಾಥ್ ಸಭೆಯಲ್ಲಿ ಗಮನ ಸೆಳೆದರು.
ಆನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರ ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದರು ಎಂದು ತಿಳಿದು ಬಂದಿದೆ.