×
Ad

ಕರಾವಳಿಯಲ್ಲಿ ಎರಡು ದಿನಗಳಲ್ಲಿ ಭಾರೀ ಮಳೆ ಸಂಭವ

Update: 2017-06-09 21:29 IST

ಮಂಗಳೂರು, ಜೂ. 9: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಬೀಳುವ ಸಂಭವ ಇದೆ ಎಂದು ಕಂದಾಯ ಇಲಾಖೆ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಮಾಹಿತಿ ನೀಡಿರುವುದಾಗಿ ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

ಅದರಂತೆ ಮುಂದಿನ ಎರಡು ದಿನಗಳಲ್ಲಿ ಕರಾವಳಿ ಪ್ರದೇಶದಲ್ಲಿ ಯಾವುದೇ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಅಥವಾ ನದಿ ಪಾತ್ರಕ್ಕೆ ತೆರಳದಂತೆ ಸೂಚಿಸಿದೆ.

ತಗ್ಗು ಪ್ರದೇಶದಲ್ಲಿ ನದಿ ಪಾತ್ರದಲ್ಲಿ ಹಾಗೂ ನದಿ ತೀರದಲ್ಲಿ ವಾಸಿಸುವ ಸಾರ್ವಜನಿಕರು ಕೂಡ ನದಿ ಪಾತ್ರ ಅಥವಾ ತಗ್ಗು ಪ್ರದೇಶಕ್ಕೆ ತೆರಳದಂತೆ ಸೂಚಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News