ಬಾಲ್ಯ ವಿವಾಹ: ಮಕ್ಕಳೇ ನೇರವಾಗಿ ದೂರು ನೀಡಿ: ಇರ್ಫಾನ್

Update: 2017-06-09 18:23 GMT

ಉಡುಪಿ, ಜೂ.9: ಪೋಷಕರು ಬಾಲ್ಯ ವಿವಾಹಕ್ಕೆ ಸಿದ್ಧತೆ ನಡೆಸಿದ್ದಲ್ಲಿ, ಮಕ್ಕಳು ಯಾವುದೇ ಭಯ ಪಡದೆ ಜಿಲ್ಲಾ ನ್ಯಾಯಾಧೀಶರು ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರಕ್ಕೆ ನೇರವಾಗಿ ದೂರು ಸಲ್ಲಿಸಬಹುದು. ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಮಗುವನ್ನು ರಕ್ಷಿಸಿ, ಸಂಬಂಧಪಟ್ಟವರ ವಿರುದ್ಧ್ದ ಕಾನೂನು ಕ್ರಮ ಕೈಗೊಳ್ಳ್ಚ್ಟಜಿಲಾಗುವುದು ಎಂದು ಪ್ರಧಾನ ಸಿವಿಲ್ ನ್ಯಾಯಾ ಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಇರ್ಫಾನ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಉಡುಪಿ, ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕ, ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡು ಇದರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ವಳಕಾಡು ಶಾಲೆಯಲ್ಲಿ ಆಯೋಜಿಸಲಾಗಿದ್ದ ಬಾಲ್ಯ ವಿವಾಹ ನಿಷೇಧ ಕುರಿತ ಜಾಗೃತಿ ಹಾಗೂ ‘ಶಾಲೆ ಕಡೆ ನನ್ನ ನಡೆ’ ಕುರಿತ ಜಾಗೃತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲ್ಯ ವಿವಾಹಕ್ಕೆ ಒಳಗಾ ಗುವ ಮಕ್ಕಳು ಈ ಕುರಿತು ತಮ್ಮ ಶಾಲೆಯ ಮುಖ್ಯ ಶಿಕ್ಷಕಿಯರಿಗೆ ಮಾಹಿತಿ ನೀಡಬಹುದು. ಶೀಘ್ರ ಕ್ರಮಕ್ಕಾಗಿ ಜಿಲ್ಲಾ ನ್ಯಾಯಾಧೀಶರು ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ನೀಡಬಹುದು. ಮಕ್ಕಳು ಲಿಖಿತ ದೂರು ನೀಡದೆ ವೌಖಿಕವಾಗಿ ದೂರು ನೀಡಿದರೂ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಶಾಲೆಯಲ್ಲಿ ತಮ್ಮ ಸಹಪಾಠಿಗಳು ಬಾಲ್ಯ ವಿವಾಹಕ್ಕೆ ಒಳಗಾಗುವ ಕುರಿತು ಸಹ ದೂರು ನೀಡಬಹುದು. ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹಗಳು ನಡೆಯುವ ಸಾಧ್ಯತೆಯಿದ್ದು, ಈ ಕುರಿತು ಸಂಬಂಧಪಟ್ಟವರು ಎಚ್ಚರಿಕೆ ವಹಿಸಬೇಕು ಎಂದು ನ್ಯಾಯಾಧೀಶರು ತಿಳಿಸಿದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ನಡೆದ ಜಾಗೃತಿ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಲತಾ, ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ. ವಲಸೆ ಕಾರ್ಮಿಕರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಾಲ್ಯ ವಿವಾಹ ನಡೆಯುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಸುಮಾರು 14,000 ಮಂದಿ ವಲಸೆ ಕಾರ್ಮಿಕರಿದ್ದು, ಇವರಲ್ಲಿ ನಾನಾ ಕಾರಣ ಗಳಿಂದ ಬಾಲ್ಯ ವಿವಾಹಗಳು ನಡೆಯುತ್ತಿವೆ. ಈ ಸಮುದಾಯದಲ್ಲಿ ಬಾಲ್ಯ ವಿವಾಹದ ದುಷ್ಪರಿಣಾಮಗಳ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಬೇಕಿದೆ ಎಂದರು.

ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ‘ಶಾಲೆ ಕಡೆ ನನ್ನ ಕಡೆ’ ಕುರಿತು ಜಾಗೃತಿ ಮೂಡಿಸಲು ಸ್ಥಳದಲ್ಲೇ ಕವನ ರಚಿಸಿ ವಾಚಿಸಿದರು. ಬಾಲ್ಯ ವಿವಾಹ ನಿಷೇಧ ಕುರಿತು ಏರ್ಪಡಿಸಿದ್ದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ನಿರ್ಮಲಾ ಬಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯೆ ಗೀತಾ ರವಿ ಶೇಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ರಾಮಚಂದ್ರರಾಜೇ ಅರಸ್, ವಳಕಾಡು ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಮೃತ್ ಶೆಣೈ ಉಪಸ್ಥಿತರಿದ್ದರು.

ಬಾಲ್ಯ ವಿವಾಹ ನಿಷೇಧ ಮತ್ತು ‘ಶಾಲೆ ಕಡೆ ನನ್ನ ಕಡೆ’ ಕುರಿತು ಸಂಪನ್ಮೂಲ ವ್ಯಕ್ತಿ ವಕೀಲ ಗಿರೀಶ್ ಪೂಜಾರಿ ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಪ್ರಭಾರ) ಶೋಭಾ ನಾಡೇಕರಣಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ನಚಿಕೇತ್ ಮತ್ತು ನೇಹಾ ಕಾರ್ಯಕ್ರಮ ನಿರೂಪಿಸಿದರು.

ಜಗದೀಶ್ಚಂದ್ರ ಅಂಚನ್‌ಗೆ ಸನ್ಮಾನ ಮಂಗಳೂರು, ಜೂ. 9: ನಗರದ ಪುರಭವನದಲ್ಲಿ ನಡೆದ ಸೌಹಾರ್ದ ಸಂಗಮ ಸಾಂಸ್ಕೃತಿಕ ದಶಮಾನೋತ್ಸವದಲ್ಲಿ ಸಾಧಕರಿಗೆ ಆಯೋಜಿಸಿದ್ದ ಸಾರ್ವಜನಿಕ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಇವರನ್ನು ಸನ್ಮಾನಿಸಲಾಯಿತು. ಕ್ರೀಡಾವರದಿಗಾರಿಕೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಎಸ್. ಜಗದೀಶ್ಚಂದ್ರ ಅಂಚನ್ ಅವರನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಕೆ.ಲಕ್ಷ್ಮೀನಾರಾಯಣ ಅಸ್ರಣ್ಣ ಅವರು ಸನ್ಮಾನಿಸಿದರು.

 ಈ ಸಂದರ್ಭ ಕರಾವಳಿ ಕಾಲೇಜು ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷ ಎಸ್.ಗಣೇಶ್ ರಾವ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕರ್ನಾಟಕ ವಕೀಲರ ಪರಿಷತ್ತಿನ ಮಾಜಿ ಉಪಾಧ್ಯಕ್ಷ, ಖ್ಯಾತ ನ್ಯಾಯವಾದಿ ತೋನ್ಸೆ ನಾರಾಯಣ ಪೂಜಾರಿ ಹಾಗೂ ಪತ್ರಕರ್ತ ಬಿ.ಎನ್.ಅಶೋಕ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News