ಅಭಿವೃದ್ಧಿಯ ಹಾದಿಯಲ್ಲಿ ಭಾರತದ ಪ್ಲಾಸ್ಟಿಕ್ ಉದ್ದಿಮೆ: ವಿಜಯ ಕುಮಾರ್
Update: 2017-06-09 23:54 IST
ಮಂಗಳೂರು, ಜೂ.9: ದೇಶದ ಪ್ಲಾಸ್ಟಿಕ್ ಉದ್ಯಮಕ್ಷೇತ್ರ ಏಳಿಗೆಯ ಹಾದಿಯಲ್ಲಿ ಸಾಗುತ್ತಿದ್ದು ಕೆಲವೇ ವರ್ಷಗಳಲ್ಲಿ ಭಾರತವು ವಿಶ್ವದ ಅತೀ ದೊಡ್ಡ ಪ್ಲಾಸ್ಟಿಕ್ ಮಾರುಕಟ್ಟೆಗಳಲ್ಲಿ ಒಂದೆನಿಸಲಿದೆ ಎಂದು ಕರ್ನಾಟಕ ರಾಜ್ಯ ಪ್ಲಾಸ್ಟಿಕ್ ಅಸೋಸಿಯೇಷನ್ ಅಧ್ಯಕ್ಷ ವಿಜಯ ಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಆಯೋಜಿಸಲಾದ ಅಂತರಾಷ್ಟ್ರೀಯ ಪ್ಲಾಸ್ಟಿಕ್ ಪ್ರದರ್ಶನ ಕಾರ್ಯಕ್ರಮ ‘ಐಪ್ಲೆಕ್ಸ್ 2017’ ಉದ್ಘಾಟಿಸಿ ಅವರು ಮಾತನಾಡಿದರು. ಮೂಲಸೌಕರ್ಯ ಕ್ಷೇತ್ರ, ಆರೋಗ್ಯಕ್ಷೇತ್ರ, ಕೃಷಿ ಕ್ಷೇತ್ರ- ಹೀಗೆ ವಿವಿಧ ಕ್ಷೇತ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿದೆ. ಪ್ಲಾಸ್ಟಿಕ್‌ನ ಪ್ರಧಾನ ಬಳಕೆದಾರ ಉದ್ದಿಮೆಯಾದ ಅಟೊಮೊಬೈಲ್ ಮತ್ತು ಇಲೆಕ್ಟ್ರಾನಿಕ್ಸ್ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿರುವುದು ಆಶಾದಾಯಕವಾಗಿದೆ. ಹಾಲಿ ಆರ್ಥಿಕ ವರ್ಷದಲ್ಲಿ ಪ್ಲಾಸ್ಟಿಕ್ ಬಳಕೆಯಲ್ಲಿ ಶೇ.20ರಷ್ಟು ಹೆಚ್ಚಳವಾಗಿದೆ ಎಂದವರು ನುಡಿದರು.