×
Ad

ನಾಟೆಕಲ್: ಅಕ್ರಮ ಮರಳು ಸಾಗಾಟದ ಲಾರಿ ವಶ

Update: 2017-06-10 19:30 IST

ಕೊಣಾಜೆ, ಜೂ. 10: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಕೊಣಾಜೆ ಪೊಲೀಸರು ನಾಟೆಕಲ್‌ನಲ್ಲಿ ವಶಪಡಿಸಿಕೊಂಡಿದ್ದಾರೆ.
 

ತೊಕ್ಕೊಟ್ಟುವಿನಿಂದ ನಾಟೆಕಲ್ ರಸ್ತೆಯಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭ ಲಾರಿ ಚಾಲಕ ಸೇರಿದಂತೆ ವಾಹನದಲ್ಲಿದ್ದ ಇತರ ನಾಲ್ವರು ಪರಾರಿಯಾಗಿದ್ದಾರೆ.

ನಾಟೆಕಲ್ ಒಳ ರಸ್ತೆಯಾಗಿ ಕೇರಳಕ್ಕೆ ಮರಳು ಸಾಗಾಟ ಮಾಡುತ್ತಿದ್ದಾಗ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News